ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಹಿಟ್ ಆ್ಯಂಡ್ ರನ್: ಕಾರ್ ಡಿಕ್ಕಿಯಾಗಿ ಬಿಎಂಟಿಸಿ ಬಸ್ ಮುಂದೆಯೇ ಬಿದ್ದ ಬೈಕ್ ಸವಾರ

Edited By:

Updated on: Nov 19, 2026 | 7:37 AM

ಮಾರತಹಳ್ಳಿ ಔಟರ್ ರಿಂಗ್ ರಸ್ತೆಯಲ್ಲಿ ನಡೆದ ಈ ಭಯಾನಕ ಅಪಘಾತದ ದೃಶ್ಯ ಕಂಡು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಸದ್ಯ ಬಿಎಂಟಿಸಿ ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಪಘಾತ ಎಸಗಿ ಪರಾರಿಯಾದ ಕಾರು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ. ಸಂಚಾರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಪರಾರಿಯಾದ ಕಾರಿನ ಪತ್ತೆಗೆ ಬಲೆ ಬೀಸಿದ್ದಾರೆ.

ಬೆಂಗಳೂರು, ನ.19: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಎದೆ ಝಲ್ ಎನಿಸುವ ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಅತ್ಯಂತ ಜನನಿಬಿಡ ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ರಸ್ತೆಗೆ ಬಿದ್ದ ಸವಾರ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಿಂಬದಿಯಿಂದ ಬರುತ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ತಪ್ಪಿದೆ. ಮಾರತಹಳ್ಳಿ ಔಟರ್ ರಿಂಗ್ ರಸ್ತೆಯಲ್ಲಿ ಬೈಕ್ ಸವಾರನೊಬ್ಬ ತನ್ನ ಪಾಡಿಗೆ ತಾನು ತೆರಳುತ್ತಿದ್ದ. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಪಕ್ಕದಿಂದ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿದ ಬೈಕ್ ಸವಾರ, ಪಕ್ಕದಲ್ಲೇ ಬರುತ್ತಿದ್ದ ಬಿಎಂಟಿಸಿ ವೋಲ್ವೋ ಬಸ್‌ನ ಮುಂಭಾಗದ ಚಕ್ರಗಳ ಸಮೀಪವೇ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಇತ್ತ ಅಪಘಾತ ಎಸಗಿದ ಕಾರು ಚಾಲಕ ಮಾನವೀಯತೆಯನ್ನೂ ಮರೆತು ವಾಹನ ನಿಲ್ಲಿಸದೆ ಅತಿ ರಭಸವಾಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿದ ಬೈಕ್ ಸವಾರ, ಪಕ್ಕದಲ್ಲೇ ಬರುತ್ತಿದ್ದ ಬಿಎಂಟಿಸಿ ವೋಲ್ವೋ ಬಸ್‌ನ ಮುಂಭಾಗದ ಚಕ್ರಗಳ ಸಮೀಪವೇ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಇತ್ತ ಅಪಘಾತ ಎಸಗಿದ ಕಾರು ಚಾಲಕ ಮಾನವೀಯತೆಯನ್ನೂ ಮರೆತು ವಾಹನ ನಿಲ್ಲಿಸದೆ ಅತಿ ರಭಸವಾಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾರತಹಳ್ಳಿ ಔಟರ್ ರಿಂಗ್ ರಸ್ತೆಯಲ್ಲಿ ನಡೆದ ಈ ಭಯಾನಕ ಅಪಘಾತದ ದೃಶ್ಯ ಕಂಡು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಸದ್ಯ ಬಿಎಂಟಿಸಿ ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಪಘಾತ ಎಸಗಿ ಪರಾರಿಯಾದ ಕಾರು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ. ಸಂಚಾರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಪರಾರಿಯಾದ ಕಾರಿನ ಪತ್ತೆಗೆ ಅಧಿಕಾರಿಗಳು ಬಿರುಸಿನ ಕಾರ್ಯಚರಣೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನವರು. ಕಳೆದ 2 ವರ್ಷದಿಂದ ಟಿವಿ9 ಕನ್ನಡದ ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ ಅನುಭವವಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದಾರೆ.

Read More