ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು
ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಶಾಮುಕ್ತ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಡ್ರಗ್ಸ್ ಸೇರಿ ಅನೇಕ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳನ್ನ ಕುರಿತು ಮಾತನಾಡಿದ್ದಾರೆ.
ಬೆಂಗಳೂರು, ಆಗಸ್ಟ್ 02: ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಶಾಮುಕ್ತ ಭಾರತ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಡ್ರಗ್ಸ್ ಸೇರಿ ಅನೇಕ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳನ್ನ ಕುರಿತು ಮಾತನಾಡಿದ್ದಾರೆ. ಕಾರ್ಯಕ್ರಮ ವೀಕ್ಷಣೆಗೆ ಬೆಳಗಾವಿ ಮತ್ತು ಬಾಗಲಕೋಟೆಗಳಲ್ಲಿಯೂ ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿ ನಗರದ ಕನ್ನಡ ಭವನ ಸೇರದಂತೆ ನಗರದಲ್ಲಿ ಎರಡು ಕಡೆಗಳಲ್ಲಿ ವ್ಯವಸ್ಥೆ ಮಾಡಿದ್ದರೆ, ಬಾಗಲಕೋಟೆಯ ನವನಗರದ ಕುಮಾರೇಶ್ವರ ಆಸ್ಪತ್ರೆ ಹಾಗೂ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿಯೂ ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

