‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಖುಷಿಯಲ್ಲಿ ರಿಷಬ್ ಶೆಟ್ಟಿ ಸುದ್ದಿಗೋಷ್ಠಿ: ಲೈವ್ ನೋಡಿ..
ನಟ ರಿಷಬ್ ಶೆಟ್ಟಿ ಅವರು ಬಹಳ ಖುಷಿಯಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ‘ಕಾಂತಾರ’ ಸಿನಿಮಾದಲ್ಲಿ ನಟಿಸಿದ ಅವರಿಗೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಅಭಿಮಾನಿಗಳು, ಆಪ್ತರು, ಸ್ನೇಹಿತರು, ಸೆಲೆಬ್ರಿಟಿಗಳು ರಿಷಬ್ಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಬಗ್ಗೆ ತಮ್ಮ ಸಂತಸ ಹಂಚಿಕೊಳ್ಳಲು ರಿಷಬ್ ಶೆಟ್ಟಿ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಅದರ ಲೈವ್ ವಿಡಿಯೋ ಇಲ್ಲಿದೆ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳು ಘೋಷಣೆ ಆಗಿದ್ದು, ಕನ್ನಡದ ನಟ ರಿಷಬ್ ಶೆಟ್ಟಿ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೈವಾರಾಧನೆಯ ಕುರಿತ ಕಥೆ ಹೊಂದಿರುವ ಈ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡಿದೆ. ರಿಷಬ್ ಶೆಟ್ಟಿ ಅವರು ಮುಖ್ಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಸೂಪರ್ ಹಿಟ್ ಆದ ಸಿನಿಮಾಗೆ ಈಗ ಪ್ರತಿಷ್ಠಿತ ಪ್ರಶಸ್ತಿ ಕೂಡ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ಪ್ರಶಸ್ತಿ ಘೋಷಣೆ ಆದ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರು ಸುದ್ದಿಗೋಷ್ಠಿ ನಡೆಸಿ ಸಂತಸ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos