Dr G Parameshwar: ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ, ಇಲ್ಲಿಗೆ ಬಂದಿದ್ದಾರೆ – ಗುಡುಗಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

| Updated By: ಸಾಧು ಶ್ರೀನಾಥ್​

Updated on: Jul 27, 2023 | 12:24 PM

ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ ಖುಷ್ಬೂ ಸುಂದರಂ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ವಿವರ ಹೀಗಿದೆ: ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಅಂತಾ ಹೇಳಿಲ್ಲ. ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತೆ, ಅದು ಅಲ್ಲಿಗೆ ಮುಗಿಯುತ್ತೆ. ಪ್ರಕರಣದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತಾರೆ. ಈಗಾಗಲೇ ಸಸ್ಪೆಂಡ್ ಮಾಡಿದ್ದಾರೆ, ಹೆಚ್ಚಿನ ಕ್ರಮ ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶಿಸಲ್ಲ, ಅವರೇ ದೂರು ದಾಖಲಿಸುತ್ತಾರೆ. ಈಗಾಗಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಸತ್ಯತೆ ಎಲ್ಲವೂ ಹೊರಬರಲಿದೆ ಎಂದಿದ್ದಾರೆ.

ಪೊಲೀಸರು ಸತ್ಯಾಸತ್ಯತೆ ನೋಡೋದಾಗಿ ಹೇಳಿದ್ದಾರೆ. ನಾನೂ ಕೂಡ ಸತ್ಯಾಸತ್ಯತೆ ತಿಳಿಯಲು ಸೂಚಿಸಿದ್ದೇನೆ. ಈ ಮಧ್ಯೆ ರಾಷ್ಟ್ರೀಯ ಮಹಿಳಾ ಆಯೋಗದವರು ಮಣಿಪುರಕ್ಕೆ ಹೋಗಿಲ್ಲ; ಇಲ್ಲಿಗೆ ಬಂದಿದ್ದಾರೆ ಎಂದು ಇದೇ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುಡುಗಿದರು.

Follow us on