AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: 6 ಮಂದಿ ವಿರುದ್ಧ ಎಫ್​ಐಆರ್​

ಕಲಬುರಗಿಯ ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: 6 ಮಂದಿ ವಿರುದ್ಧ ಎಫ್​ಐಆರ್​

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ|

Updated on:Jan 12, 2025 | 1:19 PM

Share

ಕಲಬುರಗಿಯ ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದ ಮೇಲೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜನವರಿ 10 ರಂದು ನಡೆದ ಜುನೈದಿ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜವನ್ನು ಇರಿಸಲಾಗಿತ್ತು ಎನ್ನಲಾಗಿದೆ. ರಾಷ್ಟ್ರೀಯ ಗೌರವ ಅಪಮಾನ ತಡೆಗಟ್ಟುವ ಕಾಯ್ದೆ, 1971 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಲಬುರಗಿ, ಜನವರಿ 12: ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ (National Flag) ಅಗೌರವ ತೋರಿದ್ದ ಆರು ಜನರ ವಿರುದ್ಧ ಕಲಬುರಗಿಯ (Kalaburagi) ಚೌಕ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮೊಹಮ್ಮದ್​ ಅಫ್ಜಲುದ್ದೀನ್ ಜುನೈದಿ, ಮೊಹಮ್ಮದ್ ಕಿವಾಮೊದ್ದಿನ್ ಜುನೈದಿ, ತಾಹಿರ್ ಅಲ್ಲಾವುದ್ದಿನ್ ಜುನೈದಿ, ಫಕ್ರುದ್ದಿನ್ ಮಣಿಯಾಲ್, ರಿಜ್ವಾನ್ ಅಹ್ಮದ್ ಮತ್ತು ಮೌಲಾನ್ ಅಹ್ಮದ್​ ವಿರುದ್ಧ ರಾಷ್ಟ್ರೀಯ ಗೌರಕ್ಕೆ ಅವಮಾನ ತಡೆಗಟ್ಟುವ ಕಾಯ್ದೆ 1971 ಯು/ಎಸ್​ 2 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ (ಜನವರಿ 10) ರಂದು ಶೇಖ್ ದರ್ಗಾದಲ್ಲಿ ಜುನೈದಿ ಎಂಬುವರ ಹುಟ್ಟು ಹಬ್ಬ ಆಚರಣೆ ಮಾಡಲಾಗಿತ್ತು. ಹುಟ್ಟು ಹಬ್ಬ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಈ ವೇಳೆ ಮುಸ್ಲಿಂ ಧ್ವಜದ ಕೆಳಗಡೆ ರಾಷ್ಟ್ರಧ್ವಜ ಇಟ್ಟು ಆರೋಹಣ ಮಾಡಲಾಗಿತ್ತು. ಈ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ‌ ಕೇಳಿಬಂದಿತ್ತು. ಈ ಬಗ್ಗೆ ಚೌಕ್​ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಮುಖಂಡ, ವಕೀಲ ಮೊಹಮ್ಮದ್ ಜುನೈದಿ ದೂರಿನ ದೂರು ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Jan 12, 2025 01:15 PM