ನ್ಯಾಶನಲ್ ಹೆರಾಲ್ಡ್ ಪ್ರಕರಣ: ಇಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು ನಗರದ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಯಲಯ ಬಳಿ ಕಾಂಗ್ರೆಸ್ ಕಾರ್ಯಕರ್ತರು ತೆರಳದಂತೆ ತಡೆಯಲು ಮುಂಜಾಗ್ರತೆಯ ಕ್ರಮವಾಗಿ ಪೊಲಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ದೃಶ್ಯಗಳಲ್ಲಿ ಪೊಲೀಸರು ಕಾಂಗ್ರೆಸ್ ನಾಯಕರನ್ನು ಎತ್ತಿಕೊಂಡು ಹೋಗಿ ಬಿಎಂಟಿಸಿ ಬಸ್ಗಳಲ್ಲಿ ತುಂಬಿಸುತ್ತಿರುವುದನ್ನು ನೋಡಬಹುದು. ರಾಜ್ಯದೆಲ್ಲೆಡೆ ಪ್ರತಿಭಟನೆ, ಮುಷ್ಕರಗಳ ಪ್ರವರ ಜಾರಿಯಲ್ಲಿದೆ.
ಬೆಂಗಳೂರು, ಏಪ್ರಿಲ್ 16: ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಹಿಂದಿನ ಮುಖ್ಯಸ್ಥರಾದ ರಾಜ್ಯ ಸಭಾ ಸದಸ್ಯೆ ಸೋನಿಯ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) (Enforcement Directorate) ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇದು ನಗರದಲ್ಲಿರುವ ಇಡಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ಮುಖಂಡರಾದ ಮನೋಹರ್, ವೆಂಕಟೇಶ್ ಮತ್ತು ಹನುಮಂತರಾಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು
ಇದನ್ನೂ ಓದಿ: ಕೆ ಕವಿತಾ ಆರೋಪಿ; ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಹೊಸ ಚಾರ್ಜ್ ಶೀಟ್ ಸಲ್ಲಿಸಿದ ಇಡಿ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ