ರಾಹುಲ್​ ‘ಇಡಿ’ ಗಂಟು ಜಪ್ತಿ? ಇಡಿ ವಿಚಾರಣೆ ಖಂಡಿಸಿ ​ ಕಾಂಗ್ರೆಸ್ ಹೋರಾಟ ಮಾಡ್ತಿದ್ದರೆ, ಬಿಜೆಪಿ ಇದನ್ನು ಪ್ರಶ್ನಿಸಿದೆ: ಟಿವಿ9 ಚರ್ಚೆ

| Updated By: ಸಾಧು ಶ್ರೀನಾಥ್​

Updated on: Jun 14, 2022 | 3:28 PM

National Herald case: ನ್ಯಾಷನಲ್​ ಹೆರಾಲ್ಡ್​ ಕೇಸಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಎರಡು ದಿನಗಳಿಂದ ಪ್ರಶ್ನಿಸುತ್ತಿದೆ. ಈ ಬೆಳವಣಿಗೆಯನ್ನು ಕಾಂಗ್ರೆಸ್​ ಖಂಡಿಸಿ ಹೋರಾಟ ಮಾಡುತ್ತಿದ್ದರೆ, ಬಿಜೆಪಿ ನಾಯಕರು ಕಾಂಗ್ರೆಸ್​ ವರ್ತನೆಯನ್ನು ಪ್ರಶ್ನಿಸಿದೆ

ನ್ಯಾಷನಲ್​ ಹೆರಾಲ್ಡ್​ ಕೇಸಿಗೆ (National Herald case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು (Rahul Gandhi) ಎರಡು ದಿನಗಳಿಂದ ಪ್ರಶ್ನಿಸುತ್ತಿದೆ. ಈ ಬೆಳವಣಿಗೆಯನ್ನು ಕಾಂಗ್ರೆಸ್​ ಖಂಡಿಸಿ ಹೋರಾಟ ಮಾಡುತ್ತಿದ್ದರೆ, ಬಿಜೆಪಿ ನಾಯಕರು (BJP) ಕಾಂಗ್ರೆಸ್​ ವರ್ತನೆಯನ್ನು ಪ್ರಶ್ನಿಸಿದೆ (TV 9 Kannada Digital Live).

ಈ ಮಧ್ಯೆ, ನ್ಯಾಷನಲ್ ಹೆರಾಲ್ಡ್ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರನ್ನು ಇ.ಡಿ. ಅಧಿಕಾರಿಗಳು ಇಂದು ಸುದೀರ್ಘ ವಿಚಾರಣೆಗೊಳಪಡಿಸಿದ್ದಾರೆ. ಜೂನ್ 23ರಂದು ಸೋನಿಯಾಗಾಂಧಿರನ್ನು ವಿಚಾರಣೆಗೆ ಹಾಜರಾಗಲು ಇ.ಡಿ. ಸಮನ್ಸ್ ನೀಡಿದೆ. ಆದರೇ, ಈ ಕ್ರಮಗಳ ಮೂಲಕ ಪ್ರಧಾನಿ ಮೋದಿ-ಅಮಿತ್ ಶಾ ಜೋಡಿ ಸೋನಿಯಾಗಾಂಧಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತಿದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಬಗ್ಗೆ ದೇಶದ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ದೇಶದಲ್ಲಿ ಇಂದು ಕಾಂಗ್ರೆಸ್ ಪಕ್ಷ ದೊಡ್ಡ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರನ್ನು ನ್ಯಾಷನಲ್ ಹೆರಾಲ್ಡ್ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಆಕ್ರಮ ಹಣ ವರ್ಗಾವಣೆ ಪ್ರಕರಣವು 2014ರಿಂದಲೂ ಕೋರ್ಟ್ ನಲ್ಲಿದೆ. ಮತ್ತೊಂದೆಡೆ ಇ.ಡಿ. ಕೂಡ ತನಿಖೆ ನಡೆಸುತ್ತಿದೆ.

ಆದರೇ, ಈಗ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿರನ್ನು ಇ.ಡಿ. ಅಧಿಕಾರಿಗಳು ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕರೆದಿರುವುದು ಪ್ರತೀಕಾರದ ರಾಜಕೀಯದ ಸ್ಪಷ್ಟ ಉದಾಹರಣೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಏಕೆಂದರೇ, ಕಾಂಗ್ರೆಸ್ ಪಕ್ಷ ಹಾಗೂ ಸೋನಿಯಾಗಾಂಧಿರಿಂದ ಕೇಂದ್ರದ ಈಗಿನ ಗೃಹ ಸಚಿವ ಅಮಿತ್ ಶಾ ಜೈಲಿಗೆ ಹೋಗಿದ್ದರು. 2010ರ ಜುಲೈ 25ರಂದು ಸೋಹ್ರಾಬುದ್ದೀನ್ ಶೇಖ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೊಳಗಾಗಿ ಅಮಿತ್ ಶಾ ಅಹಮದಾಬಾದ್‌ ನ ಸಬರಮತಿ ಜೈಲುಪಾಲಾಗಿದ್ದರು.

ಈ ಕುರಿತಾದ ಚರ್ಚೆಯನ್ನು ಆ್ಯಂಕರ್​ ಚಂದ್ರಮೋಹನ್​ ಇಂದಿನ ಟಿವಿ9 ಡಿಜಿಟಲ್​ ಲೈವ್​ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ