Video: ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ, ಉಕ್ಕಿ ಹರಿದ ತಮ್ಸಾ ನದಿ, ಕೊಚ್ಚಿ ಹೋದ ಮನೆಗಳು

Updated on: Sep 16, 2025 | 8:58 AM

ಡೆಹ್ರಾಡೂನ್​​ನಲ್ಲಿ ಇಂದು ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ.ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಡೆಹ್ರಾಡೂನ್, ಸೆಪ್ಟೆಂಬರ್ 16: ಡೆಹ್ರಾಡೂನ್​​ನಲ್ಲಿ ಇಂದು ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ.ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ನಿಟ್ಟಿನಲ್ಲಿ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದಾರೆ. ಗಂಟೆಗೆ 15 ಮಿಮೀಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಸಹಿತ ಮಳೆ ಮತ್ತು ಗಂಟೆಗೆ 87 ಕಿ.ಮೀ ವೇಗದಲ್ಲಿ ಬೀಸುವ ಗಾಳಿ ಬೀಸಲಿದೆ ಎಂದು ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More