‘ಸಮಾಜದ ಪ್ರತಿಯೊಬ್ಬರನ್ನೂ ಟಿವಿ9 ಗುರುತಿಸುತ್ತದೆ’; ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್​ ನಾರಾಯಣ್​

ರಶ್ಮಿಕಾ ಮಂದಣ್ಣ ಮೊದಲಾದವರಿಗೆ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ರವಿಚಂದ್ರನ್​ ಮೊದಲಾದವರು ಆಗಮಿಸಿದ್ದರು.

TV9kannada Web Team

| Edited By: Rajesh Duggumane

Jan 05, 2022 | 7:56 AM

ಟಿವಿ9 ಕನ್ನಡ ವತಿಯಿಂದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುವ ಕಾರ್ಯ ನಡೆಯಿತು. ರಶ್ಮಿಕಾ ಮಂದಣ್ಣ ಮೊದಲಾದವರಿಗೆ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ರವಿಚಂದ್ರನ್​ ಮೊದಲಾದವರು ಆಗಮಿಸಿದ್ದರು. ಈ ವೇಳೆ ಅವರು ಟಿವಿ9 ಕನ್ನಡದ ಕಾರ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ‘ಟಿವಿ9 ಅದ್ಭುತವಾಗಿ ಬೆಳೆದಿದೆ. ಮನೆಮನೆಗೂ ತಲುಪಿದೆ. ಸಮಾಜದಲ್ಲಿ ವಿವಿಧ ಸಾಧಕರನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಸಮಾಜದ ಪ್ರತಿಯೊಬ್ಬರನ್ನೂ ಟಿವಿ9 ಗುರುತಿಸುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್​. ಅಶ್ವತ್ಥ್​ ನಾರಾಯಣ್​ ಮೆಚ್ಚುಗೆಯ ಮಾತುಗಳನ್ನು ಆಡಿದರು.

ಇದನ್ನೂ ಓದಿ:  ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್

Follow us on

Click on your DTH Provider to Add TV9 Kannada