ಹೇಗಿತ್ತು ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ಪ್ರದಾನ ಸಮಾರಂಭ? ಇಲ್ಲಿದೆ ವಿಡಿಯೋ ಝಲಕ್
‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಲಾಯಿತು. ಟಿವಿ9 ಕನ್ನಡದ ಈ ಕಾರ್ಯವನ್ನು ಅತಿಥಿಗಳು ಶ್ಲಾಘಿಸಿದರು.
‘ಟಿವಿ9 ಕನ್ನಡ’ ಸುದ್ದಿ ವಾಹಿನಿಯ 15ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ 9 ಸಾಧಕರನ್ನು ಗುರುತಿಸಿ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗಳನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿ ಆಗಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಶಿವರಾಜ್ಕುಮಾರ್, ರವಿಚಂದ್ರನ್, ಸಂಗೀತ ನಿರ್ದೇಶಕ ರಘು ದೀಕ್ಷಿತ್, ಚರಣ್ ರಾಜ್, ಗಾಯಕ ಸಂಜಿತ್ ಹೆಗಡೆ ಸೇರಿದಂತೆ ಅನೇಕರು ಈ ಸಮಾರಂಭಕ್ಕೆ ಆಗಮಿಸಿದ್ದರು. ವೇದಿಕೆ ಮೇಲೆ ಹಲವು ಬಗೆಯ ಮನರಂಜನಾ ಕಾರ್ಯಕ್ರಮಗಳು ಕೂಡ ಜರುಗಿದವು. ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಲಾಯಿತು. ಟಿವಿ9 ಕನ್ನಡದ ಈ ಕಾರ್ಯವನ್ನು ಅತಿಥಿಗಳು ಶ್ಲಾಘಿಸಿದರು. ಈ ವೇಳೆ ಪುನೀತ್ ರಾಜ್ಕುಮಾರ್ ಅವರನ್ನು ಸ್ಮರಿಸಲಾಯಿತು. ಒಟ್ಟಾರೆ ಈ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ವಿಡಿಯೋದಲ್ಲಿದೆ.
ಇದನ್ನೂ ಓದಿ:
‘ಒಳ್ಳೆಯ ಕೆಲಸಕ್ಕೆ ಇದು ಸ್ಫೂರ್ತಿ’; ನವನಕ್ಷತ್ರ ಸನ್ಮಾನ ಕುರಿತು ರಘು ದೀಕ್ಷಿತ್ ಮಾತು
ನವ ನಕ್ಷತ್ರ ಸನ್ಮಾನ ವೇದಿಕೆಯಲ್ಲಿ ಕನ್ನಡ ಐಕ್ಯತೆ ಸಾರುವ ನೃತ್ಯ ಪ್ರದರ್ಶನ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು

