ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ

Updated on: Apr 09, 2026 | 12:23 PM

ವಿಘ್ನೇಶ್ ಶಿವನ್ ‘ಎಲ್​​ಐಕೆ’ (ಲವ್ ಇನ್ಶುರೆನ್ಸ್ ಕಂಪೆನಿ) ಹೆಸರಿನ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಪ್ರದೀಪ್ ರಂಗನಾಥನ್ ನಾಯಕ. ಈ ಚಿತ್ರ 10ನೇ ತಾರೀಕಿಗೆ ರಿಲೀಸ್ ಆಗಲಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲು ವಿಘ್ನೇಶ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ವಿಘ್ನೇಶ್ ಶಿವನ್ ನಿರ್ದೇಶನದ ‘ಎಲ್​​ಯುಕೆ’ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲು ವಿಘ್ನೇಶ್ ಹಾಗೂ ನಯನತಾರಾ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More