ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್ಗೂ ತೂಗುತ್ತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ದಾವಣಗೆರೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಸಚಿವ ಜಮೀರ್ ಅಹಮದ್, ಮುಖ್ಯಮಂತ್ರಿಗಳ ಸೂಚನೆಯಂತೆ ನಸೀರ್ ಬಾಗಲಕೋಟೆಯಲ್ಲಿ ಕಾರ್ಯ ನಿರ್ವಹಿಸಿದ್ದರು ಎಂದು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು, ಏ.14: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ನಡುವೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು ಬಾಗಲಕೋಟೆ ಚುನಾವಣಾ ಜವಾಬ್ದಾರಿಯನ್ನು ಹೊತ್ತಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳೇ ಅವರಿಗೆ ಬಾಗಲಕೋಟೆಯಲ್ಲಿ ಇರಲು ಸೂಚಿಸಿದ್ದರು. ದಾವಣಗೆರೆಗೆ ಬಂದು ಹೋಗುವ ಕುರಿತು ನಸೀರ್ ಅಹಮದ್ ಕೇಳಿಕೊಂಡಾಗ, ಬಾಗಲಕೋಟೆಯಲ್ಲಿಯೇ ಉಳಿದು ಕೆಲಸ ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಮುಖ್ಯಮಂತ್ರಿಗಳ ಸೂಚನೆಯಂತೆ ನಸೀರ್ ಅಹಮದ್ ಬಾಗಲಕೋಟೆಯಲ್ಲಿ 10 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು ಎಂದು ಜಮೀರ್ ಅಹಮದ್ ಹೇಳಿದ್ದಾರೆ. ಇನ್ನು ಒಂದು ವಾರಗಳ ಹಿಂದೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜನೆ ಮಾಡಿ ಹೊಸದಾಗಿ ಮರು ನಿರ್ಮಾಣ ಮಾಡುವುದಾಗಿ ಹೇಳಿದರು. ಇದೀಗ ಈ ರಾಜಕೀಯ ಬಿಕ್ಕಟ್ಟಿನ ಮುಂದುವರಿದ ಭಾಗವಾಗಿ ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ತಲೆದಂಡವಾಗಿದೆ. ಇದೀಗ ಇದರ ಪರಿಣಾಮ ಸಚಿವ ಜಮೀರ್ ಮೇಲೆಯೂ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ರಾಜಕೀಯ ಗೊಂದಲ ಎಲ್ಲಿಂದ ಶುರು ಆಗಿದ್ದು?
ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ಗೆ ಪ್ರತಿಷ್ಠೆಯ ಚುನಾವಣೆ ಆಗಿತ್ತು. ಆದರೆ ಅಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಇದೀಗ ಸೋಲಿನ ಆಂತಕ ಸೃಷ್ಟಿಸಿದೆ. ಅಲ್ಪಸಂಖ್ಯಾತ ನಾಯಕರ ಅಸಮಾಧನದಿಂದ ಇದೀಗ ಕಾಂಗ್ರೆಸ್ ಅಲ್ಲಿ ಬರುವುದು ಡೌಟ್ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ದಾವಣಗೆರೆ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹಮದ್, ಅಬ್ದುಲ್ ಜಬ್ಬರ್ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಆರೋಪ ಕೇಳಿಬಂದಿತ್ತು. ಇದರೊಂದಿಗೆ ಟಿಕೆಟ್ ವಿಚಾರವಾಗಿ ಮುಸ್ಲಿಂ ನಾಯಕರಲ್ಲಿ ಇದ್ದ ಭಿನ್ನಾಭಿಪ್ರಾಯ ಕೂಡ ಇತ್ತು. ಅಲ್ಲಿಂದ ಶುರುವಾದ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಭಿನ್ನಮತ ಇದೀಗ ರಾಜೀನಾಮೆ ವರೆಗೆ ತಲುಪಿದೆ. ಮೊದಲು ಅಬ್ದುಲ್ ಜಬ್ಬರ್ ಅವರು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಇದೀಗ ಸಿಎಂ ಸಿದ್ದರಾಮಯ್ಯ ಅವರ ಅಪ್ತ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಕೂಡ ರಾಜೀನಾಮೆ ನೀಡಿದ್ದಾರೆ ದಾವಣಗೆರೆ ಉಪಚುನಾವಣೆಯ ಗೊಂದಲಕ್ಕೆ ಕಾರಣರಾದ ಒಬ್ಬರನ್ನು ಕೂಡ ಪಕ್ಷ ಜವಾಬ್ದಾರಿಯಿಂದ ಬಿಡುಗಡೆ ಮಾಡುತ್ತಿದೆ. ಮುಂದಿನ ತಲೆದಂಡ ಸಚಿವ ಜಮೀರ್ ಎಂದು ಹೇಳಲಾಗುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
