ಸರ್ಕಾರ ಅಸ್ಥಿರಗೊಳಿಸಲು ಇಡಿ, ಐಟಿ, ಸಿಬಿಐ ಬಳಕೆ: ಕೇಂದ್ರದ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

Edited By:

Updated on: Oct 18, 2024 | 1:38 PM

ಮುಡಾ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್ ಕೇಂದ್ರದ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ನಾಯಕತ್ವ ದುರ್ಬಲಗೊಳಿಸಿ ಸರ್ಕಾರ ಅಸ್ಥಿರಗೊಳಿಸುವ ಕುತಂತ್ರ ಇದು ಎಂದು ಟೀಕಿಸಿದರು. ಡಿಕೆ ಸುರೇಶ್ ಮಾತಿನ ವಿಡಿಯೋ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್ 18: ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್, ಜಾರಿ ನಿರ್ದೇಶನಾಲಯ ದಾಳಿ ರಾಜಕೀಯ ಪ್ರೇರಿತ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 10-15 ದಿನದ ಹಿಂದೆ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಕೇಸ್​ ದಾಖಲಾದ ಹಿನ್ನೆಲೆಯಲ್ಲಿ ದಾಳಿ ಸಾಮಾನ್ಯ. ಮುಡಾ ಕೇಸ್​ನಲ್ಲಿ ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ. ಈ‌ ಪ್ರಕರಣದಲ್ಲಿ ಏನೂ ಇಲ್ಲ ಎಂಬುದು ಅವರಿಗೆ ಗೊತ್ತಾಗಲಿದೆ. ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ, ಸತ್ಯಾಂಶ ಹೊರ ಬರಬೇಕು. ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಎಂದರು.

ಮುಡಾ ಕುರಿತ ಆರೋಪಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ. ಕೊನೆಗೆ ಅವರಿಗೂ (ಇಡಿ) ಅರಿವಾಗುತ್ತದೆ ಎಂದು ಡಿಕೆ ಸುರೇಶ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ