AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar election result 2025: ಮೋದಿ ಬಿಹಾರ ಗೆಲುವಿನ ಭಾಷಣದ ನೇರಪ್ರಸಾರ

Bihar election result 2025: ಮೋದಿ ಬಿಹಾರ ಗೆಲುವಿನ ಭಾಷಣದ ನೇರಪ್ರಸಾರ

ಗಂಗಾಧರ​ ಬ. ಸಾಬೋಜಿ
|

Updated on:Nov 14, 2025 | 7:42 PM

Share

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಐತಿಹಾಸಿಕ ಗೆಲುವು ಸಾಧಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅದ್ಧೂರಿ ಸಂಭ್ರಮಾಚರಣೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡಾ, ರಾಜನಾಥ್‌ ಸಿಂಗ್‌ ಸಮ್ಮುಖದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದರು, ವಿಜಯೋತ್ಸವದ ಸಂತೋಷವನ್ನು ಹಂಚಿಕೊಂಡರು.

ದೆಹಲಿ, ನವೆಂಬರ್​ 14: ಇಡೀ ರಾಷ್ಟ್ರವೇ ಎದುರು ನೋಡ್ತಿದ್ದ ಬಿಹಾರ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಸಮೀಕ್ಷೆಗಳೂ ಊಹಿಸದ ರೀತಿ ಬಿಜೆಪಿ, ಜೆಡಿಯು ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಪ್ರಚಂಡ ಬಹುಮತ ಸಿಕ್ಕಿದೆ. ಈ ಬಾರಿ ನಮ್ದೆ ಸರ್ಕಾರ ಅಂತಿದ್ದ ಕಾಂಗ್ರೆಸ್, ಆರ್​ಜೆಡಿ ನೇತೃತ್ವದ ಮಹಾಘಟಬಂಧನ್ ಹೆಳ ಹೆಸರಿಲ್ಲದಂತಾಗಿದೆ. ಇತ್ತ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಜೋರಾಗಿದೆ. ವಿಜಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 14, 2025 07:09 PM