AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎನ್​​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Video: ಎನ್​​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

ನಯನಾ ರಾಜೀವ್
|

Updated on: Aug 19, 2025 | 11:48 AM

Share

ಎನ್​​ಡಿಎ ಸಂಸದರ ಸಭೆಯಲ್ಲಿ ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು.ಉಪರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ನಡೆಯಲಿದೆ.ತನ್ಮಧ್ಯೆ, ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿ ಬಣವು ಎನ್‌ಡಿಎ ಆಯ್ಕೆ ಮಾಡಿದವರ ವಿರುದ್ಧ ಸ್ಪರ್ಧಿಸಲು ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಚರ್ಚೆಗಳನ್ನು ನಡೆಸುತ್ತಿದೆ.

ನವದೆಹಲಿ, ಆಗಸ್ಟ್​ 19: ಎನ್​​ಡಿಎ ಸಂಸದರ ಸಭೆಯಲ್ಲಿ ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು.ಉಪರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ನಡೆಯಲಿದೆ.ತನ್ಮಧ್ಯೆ, ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿ ಬಣವು ಎನ್‌ಡಿಎ ಆಯ್ಕೆ ಮಾಡಿದವರ ವಿರುದ್ಧ ಸ್ಪರ್ಧಿಸಲು ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಚರ್ಚೆಗಳನ್ನು ನಡೆಸುತ್ತಿದೆ.

ವಿರೋಧ ಪಕ್ಷಗಳು ಮಧ್ಯಾಹ್ನದ ಬಳಿಕ ತನ್ನ ಅಭ್ಯರ್ಥಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಎನ್‌ಡಿಎ ಘೋಷಣೆಗೆ ಪ್ರತಿಕ್ರಿಯೆಯಾಗಿ ವಿರೋಧ ಪಕ್ಷವು ತನ್ನ ನಡೆಯನ್ನು ಕಾರ್ಯತಂತ್ರ ರೂಪಿಸುತ್ತಿದೆ.

ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಎನ್​​ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ನಿರ್ಧಾರವನ್ನು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದ್ದು, ಪಕ್ಷದ ಅದ್ಯಕ್ಷ ಜೆಪಿ ನಡ್ಡಾ ಅವರು ಹೆಸರನ್ನು ಪ್ರಕಟಿಸಿದ್ದಾರೆ.

ತಮಿಳುನಾಡಿನ ತಿರುಪ್ಪೂರಿನಲ್ಲಿ 1957 ರ ಅಕ್ಟೋಬರ್ 20 ರಂದು ಜನಿಸಿದ ರಾಧಾಕೃಷ್ಣನ್ ಅವರ ರಾಜಕೀಯ ಜೀವನವು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​​ಎಸ್​ಎಸ್​) ಮತ್ತು ಜನಸಂಘದೊಂದಿಗೆ ಆರಂಭವಾಯಿತು. ಸಿಪಿ ರಾಧಾಕೃಷ್ಣನ್ 70ರ ದಶಕದಲ್ಲಿ ಆರ್​ಎಸ್​ಎಸ್​​ನಲ್ಲಿ ಸಕ್ರಿಯರಾಗಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ