ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಬಿಹಾರದಲ್ಲಿ ಪ್ರವಾಸಕ್ಕೆ ತೆರಳಿದ್ದ 11 ಜನರ ಗುಂಪೊಂದು ಪ್ರವಾಹದಲ್ಲಿ ಸಿಲುಕಿತ್ತು. ಈ ಬಗ್ಗೆ ಮಾಹಿತಿ ಪಡೆದ ತಕ್ಷಣ ಕೈಮೂರ್ ಜಿಲ್ಲಾಡಳಿತ ಚೈನ್‌ಪುರ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡವನ್ನು ಸ್ಥಳಕ್ಕೆ ಕಳುಹಿಸಿತ್ತು. ಭಾರೀ ಮಳೆಯಿಂದಾಗಿ ನೀರು ರಭಸವಾಗಿ ಹರಿಯುತ್ತಿತ್ತು.
ಕೈಮೂರ್: ಪ್ರವಾಹದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು NDRF ರಕ್ಷಣಾ ಸಿಬ್ಬಂದಿ ಸತತ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದಾರೆ. ಬಿಹಾರದ ಕೈಮೂರ್ ಜಿಲ್ಲೆಯ ಕರ್ಕಟ್ ಜಲಪಾತದಲ್ಲಿ ಸಿಲುಕಿದ್ದ 11 ಪ್ರವಾಸಿಗರನ್ನು ಎನ್‌ಡಿಆರ್‌ಎಫ್ ತಂಡ ರಕ್ಷಿಸಿತ್ತು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಲಪಾತದ ಸೊಬಗನ್ನು ಕಣ್ತುಂಬಿಕೊಳ್ಳಲು ತೆರಳಿದ್ದ ಪ್ರವಾಸಿಗರು ಪ್ರವಾಹದಲ್ಲಿ ಸಿಲುಕಿಕೊಂಡರು. ಏಕಾಏಕಿ ಸುರಿದ ಭಾರೀ ಮಳೆ ಹಾಗೂ ಅದೇ ಸಮಯದಲ್ಲಿ ಜಲಪಾತದಲ್ಲಿ ಪ್ರವಾಹದ ಹರಿವು ಪ್ರವಾಸಿಗರಿಗೆ ಎಲ್ಲಿಗೂ ಹೋಗಲು ಸಾಧ್ಯವಾಗದಂತಾಯಿತು. ಕೆಲವರು ಮರಗಳನ್ನು ಹತ್ತಿ ಇಡೀ ರಾತ್ರಿ ಜೀವ ಕೈಯಲ್ಲಿ ಹಿಡಿದು ಕಳೆದರು. ಅವರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ಬಹಳ ಕಷ್ಟಪಟ್ಟು ರಕ್ಷಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos