ಕೊವಿಡ್ ಎನ್.1 ತಳಿ ಜಾಸ್ತಿ ಅಪಾಯಕಾರಿ ಅಲ್ಲ, ಆದರೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಸಡ್ಡೆ ಬೇಡ: ಡಾ ಶರಣಪ್ರಕಾಶ್ ಪಾಟೀಲ್, ಸಚಿವ

|

Updated on: Dec 23, 2023 | 7:17 PM

ಬೆಂಗಳೂರಲ್ಲಿರುವ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕೋವಿಡ್ ಜೆಎನ್.1 ಸೋಂಕಿನ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ದತೆಗಳನ್ನು ಡಾ ಶರಣಪ್ರಕಾಶ್ ಪಾಟೀಲ್ ವೀಕ್ಷಿಸಿದರು. ಹೊಸ ವರ್ಷಾಚರಣೆ ಹೇಗೆ ಅನ್ನೋದು ನಗರವಾಸಿಗಳನ್ನು ಒಂದೇ ಸಮನೆ ಕಾಡುತ್ತಿರುವ ವಿಷಯವಾಗಿರುವ ಹಿನ್ನೆಲೆಯಲ್ಲಿ ಇದುವರೆಗೆ ಯಾವುದೇ ಮಾರ್ಗಸೂಚಿಯನ್ನು ಸರ್ಕಾರ ಸಿದ್ಧಪಡಿಸಿಲ್ಲ ಎಂದು ಸಚಿವ ಹೇಳಿದರು.

ಬೆಂಗಳೂರು: ಕೋವಿಡ್ ಜೆಎನ್.1 (Covid JN.1) ರೂಪಾಂತರಿ ತಳಿಯ ಬಗ್ಗೆ ಜನರು ಆತಂಕಪಡುವ ಅವಶ್ಯಕತೆಯಿಲ್ಲ ಆದರೆ ಹಾಗಂತ ಮುನ್ನೆಚ್ಚರಿಕೆ ಕ್ರಮಗಳನ್ನು ಯಾವ ಕಾರಣಕ್ಕೂ ಕಡೆಗಣಿಸಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ (Dr Sharan Prakash Patil) ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ, ವಿಶ್ವ ಆರೋಗ್ಯ ಸಂಸ್ಥೆಯೇ (WHO) ಹೊಸ ತಳಿ ಅಪಾಯಕಾರಿ ಅಲ್ಲವೆಂದು ಹೇಳಿರುವುದರಿಂದ ಆತಂಕ ಪಡಬೇಕಿಲ್ಲ. ಆದರೆ 60ಕ್ಕಿಂತ ಹೆಚ್ಚಿನ ಪ್ರಾಯದವರು ಅದರಲ್ಲೂ ವಿಶೇಷವಾಗಿ ಮಧುಮೇಹ, ಅಧಿಕ ರಕದೊತ್ತಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಲೇಬೇಕು ಎಂದು ಡಾ ಪಾಟೀಲ್ ಹೇಳಿದರು. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಆಸ್ಪತ್ರೆಗಳಲ್ಲಿ, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದೆ. ವಾರ್ಡ್ ಗಳಲ್ಲಿ ಸಾಕಷ್ಟಿ ಬೆಡ್, ಆಕ್ಸಿಜನ್ ಸಿಲಿಂಡರ್ ಮತ್ತು ಅಗತ್ಯವಿರುವ ಎಲ್ಲ ಉಪಕರಣಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಡಾ ಶರಣಪ್ರಕಾಶ್ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on