ದರ್ಶನ್ ವಿಷಯಕ್ಕೆ ಪ್ರಾಮುಖ್ಯತೆ ನೀಡುವ ಅವಶ್ಯಕತೆಯಿಲ್ಲ: ನಿಖಿಲ್ ಕುಮಾರಸ್ವಾಮಿ

ದರ್ಶನ್ ವಿಷಯಕ್ಕೆ ಪ್ರಾಮುಖ್ಯತೆ ನೀಡುವ ಅವಶ್ಯಕತೆಯಿಲ್ಲ: ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 30, 2024 | 3:31 PM

ದರ್ಶನ್ ಜೈಲಿನಲ್ಲಿದ್ದು ಕಾನೂನು ಉಲ್ಲಂಘಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್, ದರ್ಶನ್ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ, ನಾಡಿನ ಕಾನೂನು ಎಲ್ಲವನ್ನೂ ನೋಡಿಕೊಳ್ಳುತ್ತದೆ, ಪ್ರತಿಯೊಬ್ಬರು ಕಾನೂನು ವ್ಯವಸ್ಥೆಗೆ ತಲೆಬಾಗಲೇಬೇಕು ಎಂದರು.

ತುಮಕೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ರಾಜ್ಯದ ಜನತೆ ಜೆಡಿಎಸ್ ಮೈತ್ರಿಯನ್ನು ಒಪ್ಪಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಕೂಟಕ್ಕೆ ಅತಿಹೆಚ್ಚು ಸೀಟುಗಳನ್ನು ಗೆದ್ದುಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಿದ್ದಾರೆ, ಮುಂಬರುವ ಎಲ್ಲ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿಗೆ ಎದುರಾಗುತ್ತಿರುವ ಸಮಸ್ಯೆ ಎರಡೂ ಪಕ್ಷಗಳಿಗೆ ಸವಾಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   JDS ಕಾರ್ಯಕರ್ತರು, ಪ್ರೀತಂ ಗೌಡ ಬೆಂಬಲಿಗರ ನಡುವಿನ ಸಂಘರ್ಷ; ಅಸಲಿ ಕಾರಣ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ ಆಪ್ತ