“ನಿಮ್ಮ ಕಾಲಿಗೆ ಬೀಳ್ತೀವಿ, ನಮ್ಮೂರಲ್ಲಿ ಸಾರಾಯಿ ಬಂದ್ ಮಾಡಿಸಿ”: ಶಾಸಕರ ಮುಂದೆ ಕಣ್ಣೀರು ಹಾಕಿದ ಮಹಿಳೆಯರು

Edited By:

Updated on: Mar 20, 2026 | 11:58 AM

ಬಸವಕಲ್ಯಾಣದ ನೀಲಕಂಠವಾಡಿ ಗ್ರಾಮದಲ್ಲಿ ಮದ್ಯದ ಹಾವಳಿ ಮಿತಿಮೀರಿದೆ. ನೂರಾರು ಮಹಿಳೆಯರು ಶಾಸಕ ಶರಣು ಸಲಗರ್ ಮುಂದೆ ಕಣ್ಣೀರಿಡುತ್ತಾ, ಮದ್ಯ ಮಾರಾಟ ನಿಷೇಧಕ್ಕೆ ಅಂಗಲಾಚಿದ್ದಾರೆ. ಮದ್ಯಪಾನದಿಂದ ಅನೇಕ ಯುವಕರು ಪ್ರಾಣ ಕಳೆದುಕೊಂಡಿದ್ದು, ಹಲವು ಮಹಿಳೆಯರು ವಿಧವೆಯರಾಗಿದ್ದಾರೆ. ಪೊಲೀಸ್ ಕ್ರಮದ ಕೊರತೆ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸಾರಾಯಿ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.

ಬೀದರ್, ಮಾ.20: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನೀಲಕಂಠವಾಡಿ ಗ್ರಾಮದಲ್ಲಿ ಮದ್ಯದ ಹಾವಳಿ ಮಿತಿಮೀರಿದೆ. ಗ್ರಾಮಕ್ಕೆ ಭೇಟಿ ನೀಡಿದ್ದ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರ ಮುಂದೆ ನೂರಾರು ಮಹಿಳೆಯರು ಕಣ್ಣೀರಿಡುತ್ತಾ, ಗ್ರಾಮದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಅಂಗಲಾಚಿದ್ದಾರೆ. ಗ್ರಾಮದಲ್ಲಿ ಮದ್ಯಪಾನದ ಚಟಕ್ಕೆ ಬಿದ್ದು ಕಾಲೇಜು ಯುವಕರು ಸೇರಿದಂತೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. “ನಮ್ಮೂರಿನಲ್ಲಿ ಅನೇಕ ಮಹಿಳೆಯರು ಈಗಾಗಲೇ ವಿಧವೆಯರಾಗಿದ್ದಾರೆ, ಇನ್ನು ಮುಂದಾದರೂ ಯುವಕರ ಭವಿಷ್ಯ ಕಾಪಾಡಿ” ಎಂದು ಮಹಿಳೆಯರು ಶಾಸಕರ ಮುಂದೆ ಅತ್ತಿದ್ದಾರೆ. ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಹಾಗೂ ಹಾದಿಬೀದಿಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ಮಾಡಲಾಗುತ್ತಿದೆ. ದೂರು ನೀಡಿದರೂ ಪೊಲೀಸರು ಬಂದು ಸುಮ್ಮನೆ ನೋಡಿ ಹೋಗುತ್ತಾರೆಯೇ ಹೊರತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. “ನಿಮ್ಮ ಕಾಲಿಗೆ ಬೀಳ್ತೀವಿ, ಹೇಗಾದರೂ ಮಾಡಿ ನಮ್ಮೂರಲ್ಲಿ ಸಾರಾಯಿ ಬಂದ್ ಮಾಡಿಸಿ” ಎಂದು ಮಹಿಳೆಯರು ಶಾಸಕರ ಹತ್ತಿರ ಪಟ್ಟು ಹಿಡಿದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 20, 2026 11:57 AM
Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More