ಪುನೀತ್ ಬಯೋಗ್ರಫಿ ‘ನೀನೆ ರಾಜಕುಮಾರ’ ರಿಲೀಸ್ ಮಾಡಿದ ಕಿಚ್ಚ ಸುದೀಪ್ ಹೇಳಿದ್ದೇನು?
‘ಒಂದೊಳ್ಳೆಯ ಕೃತಿಯ ಮೂಲಕ ಪುನೀತ್ ರಾಜ್ಕುಮಾರ್ ಅವರಿಗೆ ಶರಣು ಹುಲ್ಲೂರು ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ. ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ’ ಎಂದರು ಸುದೀಪ್.
ಪುನೀತ್ ರಾಜ್ಕುಮಾರ್ (Puneeth Rajkumar) ಬಗ್ಗೆ ಬರೆದ ‘ನೀನೆ ರಾಜಕುಮಾರ’ (Neene Rajakumara)ಕೃತಿಯನ್ನು ಕಿಚ್ಚ ಸುದೀಪ್ ಇಂದು (ಮಾರ್ಚ್ 15) ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಇದನ್ನು ಬರೆದಿದ್ದಾರೆ. ಕೃತಿಯ ಬಿಡುಗಡೆ ಮಾಡಿದ ನಂತರ ಮಾತನಾಡಿದ ಸುದೀಪ್ (Sudeep), ‘ಒಂದೊಳ್ಳೆಯ ಕೃತಿಯ ಮೂಲಕ ಪುನೀತ್ ರಾಜ್ಕುಮಾರ್ ಅವರಿಗೆ ಶರಣು ಹುಲ್ಲೂರು ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ. ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ’ ಎಂದರು. ಪುನೀತ್ ರಾಜ್ಕುಮಾರ್ ಕುರಿತಾಗಿ ಬರುತ್ತಿರುವ ಮೊದಲ ಬಯೋಗ್ರಫಿ ಇದು. ಇದರಲ್ಲಿ ಪುನೀತ್ ಜೀವನ ಕುರಿತಾದ ವಿಷಯಗಳು ಮಾತ್ರ ಇಲ್ಲ. ಅವರ ವೃತ್ತಿ ಮತ್ತು ಖಾಸಗಿ ಜೀವನ ಕುರಿತಾದ ಅಪರೂಪದ ವಿಷಯಗಳನ್ನು ಮತ್ತು ಛಾಯಾಚಿತ್ರಗಳನ್ನು ಈ ಪುಸ್ತಕ ಒಳಗೊಂಡಿದೆ. ಪುನೀತ್ ಬಾಲ್ಯ, ಬಾಲ್ಯದಲ್ಲಿ ನಟಿಸಿದ ಸಿನಿಮಾಗಳು ಮತ್ತು ಅರಸು ಚಿತ್ರದಿಂದ ಜೇಮ್ಸ್ ಚಿತ್ರದವರೆಗಿನ ಸಮಗ್ರ ನೋಟ ಈ ಪುಸ್ತಕದಲ್ಲಿದೆ.
ಇದನ್ನೂ ಓದಿ: Priya Anand: ‘ಜೇಮ್ಸ್’ ಹಾಗೂ ಪುನೀತ್ ಬಗ್ಗೆ ಮಾತನಾಡುತ್ತಾ ಭಾವುಕರಾದ ಪ್ರಿಯಾ ಆನಂದ್
ಪುನೀತ್ ಬರ್ತ್ಡೇಗೂ ಮೊದಲು ‘ಪವರಿಸಮ್’ ಹಾಗೂ ‘ಮಹಾನುಭಾವ’ ಸಾಂಗ್ ರಿಲೀಸ್