ಎಲ್ಲರಿಗೂ ನಮಸ್ಕಾರ: ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು ನೋಡಿ
ಬೆಂಗಳೂರಿಗೆ ಆಗಮಿಸಿರುವ ಖ್ಯಾತ ಜಾವೆಲಿನ್ ತ್ರೋ ಪಟು ನೀರಜ್ ಚೋಪ್ರಾ ಇಲ್ಲಿನ ವಾತಾವರಣ ಹಾಗೂ ಜನರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಕ್ರೀಡಾ ಇಲಾಖೆ ನೀಡಿದ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಈ ಹಿಂದೆ ಬೆಂಗಳೂರಿಗೆ ತರಬೇತಿಗಾಗಿ ಬಂದಿದ್ದ ಸಂದರ್ಭವನ್ನು ಮೆಲುಕು ಹಾಕಿದರು. ನೀರಜ್ ಚೋಪ್ರಾ ಮಾತಿನ ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಜುಲೈ 4: ಜುಲೈ 5ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕಾಗಿ ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ನಗರಕ್ಕೆ ಆಗಮಿಸಿದ್ದಾರೆ. ಅವಳಿ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಸೌಹಾರ್ದ ಭೇಟಿ ಮಾಡಿದ್ದಾರೆ. ಆ ನಂತರ ಅವರು ಮಾಧ್ಯಮ ಪ್ರತಿನಿಧಗಳ ಜತೆಗೂ ಮಾತನಾಡಿದ್ದಾರೆ. ಇದೇ ವೇಳೆ, ‘‘ಎಲ್ಲರಿಗೂ ನಮಸ್ಕಾರ, ಕರ್ನಾಟಕ’’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಅವರು ಬೆಂಗಳೂರಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಎಂಜಿ ರೋಡ್, ಬೆಂಗಳೂರಿನ ಮಾಲ್ಗಳಲ್ಲಿ ಸುತ್ತಾಡಿದ್ದನ್ನು, ಇಲ್ಲಿ ತರಬೇತಿ ಪಡೆದಿದ್ದನ್ನು ನೆನಪಿಸಿಕೊಂಡಿದ್ದಾರೆ.
2016-17ರಲ್ಲಿ 5-6 ತಿಂಗಳು ಇಲ್ಲಿ ತರಬೇತಿ ಪಡೆದಿದ್ದೆ ಎಂದ ಅವರು ಇಲ್ಲಿನ ಹವಾಮಾನ ಮತ್ತು ಜನರನ್ನು ತುಂಬಾ ಇಷ್ಟಪಡುತ್ತೇನೆ ಎಂದರು. ನೀರಜ್ ಮಾತಿನ ವಿಡಿಯೋ ಇಲ್ಲಿದೆ ನೋಡಿ.