ನೀಟ್ ಪರೀಕ್ಷೆ: ಜನಿವಾರ ತೆಗೆದು ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ
ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ NEET ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರ ತೆಗೆಸಲಾಗಿದೆ. ಪರೀಕ್ಷಾ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಶ್ರೀಪಾದ್ ಪಾಟೀಲ್ ಅವರು ಜನಿವಾರ ತೆಗೆಯದಿದ್ದರೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕಲಬುರಗಿ, ಮೇ 04: ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಈ ಸಂಬಂಧ ಶ್ರೀಪಾದ್ ಪಾಟೀಲ್ ಮಾತನಾಡಿ, ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗು. ಇಲ್ಲದಿದ್ದರೆ ಪರೀಕ್ಷೆ ಬರೆಯಬೇಡ ಅಂದ್ರು. ಹೀಗಾಗಿ, ಜನಿವಾರ ತೆಗೆದೆ ಎಂದು ಹೇಳಿದರು.
Published on: May 04, 2025 07:22 PM
Latest Videos

ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ

ಎಕ್ಸ್ಪ್ರೆಸ್ವೇನಲ್ಲಿ ಬೈಕ್ ಸ್ಟಂಟ್, ಎರಡೂ ಬೈಕ್ ಮುಖಾಮುಖಿ ಡಿಕ್ಕಿ

ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
