ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಇದು ಕೆಟ್ಟ ಹೆಸರು ತರುವ ಪ್ರಯತ್ನ, ಸತೀಶ್ ಜಾರಕಿಹೊಳಿ
ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯ ಜನಿವಾರ ತೆಗೆದ ಘಟನೆ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿದ್ದಾರೆ. ಇದು ಖಾಸಗಿ ಸಂಸ್ಥೆಯ ಕೃತ್ಯ ಎಂದು ಹೇಳಿ ಸರ್ಕಾರದ ಹೊಣೆಗಾರಿಕೆಯನ್ನು ಅವರು ತಳ್ಳಿಹಾಕಿದ್ದಾರೆ. ಈ ಹೇಳಿಕೆ ವ್ಯಾಪಕ ಟೀಕೆಗೆ ಒಳಗಾಗಿದೆ. ರಾಜಕೀಯ ಲಾಭಕ್ಕಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಎಂದು ಸಚಿವರು ಹೇಳಿದ್ದಾರೆ. ಈ ಘಟನೆಯು ಗಂಭೀರವಾದ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗಿಸಲಾಗಿದೆ. ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ ಯಾವುದಾದರೂ ಒಂದು ಇನ್ಸಿಡೆಂಟ್ ಆಗಿರಬಹುದು. ಖಾಸಗಿ ಸಂಸ್ಥೆಗಳಲ್ಲಿ ಆಗಿರುತ್ತೆ. ಸರ್ಕಾರವನ್ನು ಇದಕ್ಕೆ ಹೊಣೆ ಮಾಡಲು ಆಗಲ್ಲ. ರಾಜಕೀಯದಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.
Latest Videos
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

