‘ಎರಡು ವರ್ಷದ ಶ್ರಮ ವ್ಯರ್ಥವಾಯಿತು’: ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳು ಆಳವಾದ ನಿರಾಶೆ ವ್ಯಕ್ತಪಡಿಸಿದ್ದಾರೆ. ಎರಡು ವರ್ಷಗಳ ಕಠಿಣ ಪರಿಶ್ರಮ ವ್ಯರ್ಥವಾಗಿದ್ದು, ಮರುಪರೀಕ್ಷೆ ಮತ್ತು ಪ್ರವೇಶ ವಿಳಂಬದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸೀಟುಗಳ ಮಾರಾಟದ ಆರೋಪಗಳ ನಡುವೆ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮತ್ತು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಬೆಂಗಳೂರು, ಮೇ 12: ಮೇ3 ರಂದು ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಲ್ಲಿ ನೀಟ್ ಪರೀಕ್ಷೆಯನ್ನೇ NTA ರದ್ದು ಮಾಡಿದೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇತ್ತ ರಾಜ್ಯದಿಂದ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾನಾಡಿರುವ ವಿದ್ಯಾರ್ಥಿನಿ ಮಾನ್ಯತಾ, ಎರಡು ವರ್ಷದಿಂದ ಕಷ್ಟ ಪಟ್ಟು ಪರೀಕ್ಷೆ ಬರೆದಿದ್ದೇವೆ. ಈ ಬಾರಿ ಪರೀಕ್ಷೆ ಚೆನ್ನಾಗಿ ಆಗಿದೆ. ಒಳ್ಳೆಯ ರ‍್ಯಾಂಕ್ ಬರುವ ಸಾಧ್ಯತೆ ಇತ್ತು. ಸರ್ಕಾರಿ ಕಾಲೇಜ್ ಅಥವಾ ಖಾಸಗಿಯಲ್ಲಿ ಮೆಡಿಕಲ್ ಸೀಟ್ ಸಿಗುವ ಸಾಧ್ಯತೆ ಇತ್ತು. ಆದರೆ ಇದೀಗ ಪರೀಕ್ಷೆ ರದ್ದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 12, 2026 04:37 PM
Loading...
Unable to load recommendations.
Follow Us
