ಎದೆ ಸೀಳಿದರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ, ನೀಟ್ ಪರೀಕ್ಷೆಗೂ ಏನು ಸಂಬಂಧ?: ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆ ಕುರಿತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ, ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ. ಆತ ಬಂದು ನೀಟ್ ವಿರುದ್ದ ಹೋರಾಟ ಮಾಡುತ್ತಿದ್ದಾನೆ ಎಂದರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.
ಚಿಕ್ಕಮಗಳೂರು, ಜುಲೈ 24: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ, ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ. ಆತ ಬಂದು ನೀಟ್ ವಿರುದ್ದ ಹೋರಾಟ ಮಾಡುತ್ತಿದ್ದಾನೆ ಎಂದರೆ ಏನರ್ಥ? ಪ್ರತಿಭಟನೆಯಲ್ಲಿ ಬಂದ ಮುಲ್ಲಾ ಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇಳ್ತಾರೆ, ಮೋದಿ ಹಠಾವೋ ಅಂತಾರೆ. ಸಿಎಎಗೂ, ಎನ್ಆರ್ಸಿಗೂಗೂ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೂ ಏನು ಸಂಬಂಧ? ಭಾರತವನ್ನ ತುಂಡರಿಸಬೇಕು ಎಂದು ಹೇಳಿದ ತುಕಡೆ ಗ್ಯಾಂಗ್ಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು ಎಂದವರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

