AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Exam 2026: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ

NEET Exam 2026: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ

ಗಣಪತಿ ಶರ್ಮಾ
|

Updated on: May 12, 2026 | 1:59 PM

Share

ನೀಟ್ ಯುಜಿ 2026 ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸಚಿವ ಮಧು ಬಂಗಾರಪ್ಪ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಮಕ್ಕಳ ಭವಿಷ್ಯದೊಂದಿಗೆ ಆಟವಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯವಸ್ಥೆಯ ನ್ಯೂನತೆಗಳ ಹೊರತಾಗಿಯೂ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಎತ್ತಿ ಹಿಡಿದರು.

ಬೆಂಗಳೂರು, ಮೇ 12: ನೀಟ್ ಯುಜಿ 2026 ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೇಂದ್ರ ಸರ್ಕಾರದ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ರಾಜ್ಯ ಸರ್ಕಾರದಲ್ಲಿ ಆಗಿದೆಯೇ ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಈ ಪ್ರಶ್ನೆ ಕೇಳಿ ಎಂದು ಸವಾಲು ಹಾಕಿದರು. ಸತತ ಎರಡನೇ ವರ್ಷವೂ ಇಂತಹ ಅವ್ಯವಸ್ಥೆ ನಡೆದಿರುವುದು ಮಕ್ಕಳ ಭವಿಷ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ವಿದ್ಯಾರ್ಥಿಗಳು ಉತ್ತಮ ವ್ಯವಸ್ಥೆ ಇಲ್ಲದಿದ್ದರೂ ಕಷ್ಟಪಟ್ಟು ಓದಿ ಉತ್ತಮ ಫಲಿತಾಂಶ ನೀಡಲು ಪ್ರಯತ್ನಿಸಿದ್ದಾರೆ. ಆದರೆ ಕೇಂದ್ರದ ‘ಅವ್ಯವಸ್ಥೆ ಮತ್ತು ಹೊಲಸು ಅಡ್ಮಿನಿಸ್ಟ್ರೇಷನ್’ ಕಾರಣದಿಂದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಸಚಿವರು ಬಲವಾಗಿ ಪ್ರತಿಪಾದಿಸಿದರು. ತಮಟೆ ಹೊಡೆದು ದೀಪ ಹಚ್ಚುವವರಿಗೆ ಇನ್ನೇನು ಹೇಳಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us