ಕಳಪೆ ವಿಚಾರದಲ್ಲಿ ನಡೆದಿದೆ ಭರ್ಜರಿ ಚರ್ಚೆ; ಸಿಗೋದು ಯಾರಿಗೆ?

Updated on: Nov 10, 2023 | 9:06 AM

ಈ ವಾರ ಉತ್ತಮ ಯಾರಾಗುತ್ತಾರೆ, ಕಳಪೆ ಯಾರಾಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ.

ಬಿಗ್ ಬಾಸ್ (Bigg Boss) ಮನೆಯಲ್ಲಿ ಪ್ರತಿ ವಾರ ಉತ್ತಮ ಹಾಗೂ ಕಳಪೆ ನೀಡಲಾಗುತ್ತದೆ. ಈ ವಾರ ದೊಡ್ಮನೆಯಲ್ಲಿ ಅನೇಕರು ಉತ್ತಮವಾಗಿ ಪರ್ಫಾರ್ಮೆನ್ಸ್ ನೀಡಿದ್ದಾರೆ. ಈ ಪೈಕಿ ಉತ್ತಮ ಯಾರಾಗುತ್ತಾರೆ, ಕಳಪೆ ಯಾರಾಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಈ ಪ್ರೋಮೋದಲ್ಲಿ ಅನೇಕರು ನೀತು ವನಜಾಕ್ಷಿಗೆ ಕಳಪೆ ಪಟ್ಟ ನೀಡಿದ್ದಾರೆ. ಇನ್ನೂ ಕೆಲವರು ಈಶಾನಿ ಹೆಸರನ್ನು ಎತ್ತಿದ್ದಾರೆ. ವಜ್ರಕಾಯ ತಂಡದಲ್ಲಿದ್ದವರಿಗೇ ಅವರ ಆಟ ಇಷ್ಟ ಆಗಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More