ಪ್ರವಾಸಿಗರ ಜೀವದ ಜೊತೆ ಚೆಲ್ಲಾಟ: ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರ
Kodagu News: ಕೊಡಗಿನ ಪ್ರಖ್ಯಾತ ಅಬ್ಬಿ ಫಾಲ್ಸ್ ವೀಕ್ಷಣಾ ಗೋಪುರ ಸಂಪೂರ್ಣ ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿದೆ. ಭದ್ರತಾ ತಡೆಬೇಲಿಗಳು ಕುಸಿದು, ಸಣ್ಣ ಮಕ್ಕಳು ಕೆಳಗೆ ಬೀಳುವ ಭೀತಿ ನಿರ್ಮಾಣವಾಗಿದೆ. ಪ್ರತಿದಿನ ಲಕ್ಷಾಂತರ ಆದಾಯ ಗಳಿಸುತ್ತಿದ್ದರೂ, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಗಮನ ನೀಡದೇ ಸ್ಥಳೀಯಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗು, ಜುಲೈ 16: ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿರುವ ಪ್ರಸಿದ್ಧ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರವು ಸಂಪೂರ್ಣ ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿದೆ. ಕಬ್ಬಿಣದ ತಡೆಬೇಲಿಗಳು ಕುಸಿದಿದ್ದು, ಕೆಲವೆಡೆ ಹಗ್ಗದಿಂದ ಕಟ್ಟಿರುವುದು ಕಂಡುಬಂದಿವೆ. ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ತಡೆಬೇಲಿಗೆ ಒರಗುವಾಗ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಬ್ಬಿ ಫಾಲ್ಸ್‌ನಿಂದ ವರ್ಷಕ್ಕೆ 2 ಕೋಟಿಗೂ ಅಧಿಕ ಆದಾಯ ಬರುತ್ತದೆ. ಆದರೂ, ಬರುವ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಪಂಚಾಯತಿ ಅಥವಾ ಪ್ರವಾಸೋದ್ಯಮ ಇಲಾಖೆ ಗಮನ ಹರಿಸುತ್ತಿಲ್ಲ. ಜಲಪಾತದ ಬಳಿ ಭದ್ರತಾ ಸಿಬ್ಬಂದಿ ಇಲ್ಲ, ಸಿಸಿಟಿವಿ ಕ್ಯಾಮೆರಾಗಳನ್ನೂ ಅಳವಡಿಸಿಲ್ಲ. ಈ ನಿರ್ಲಕ್ಷ್ಯದ ಬಗ್ಗೆ ಪ್ರವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ತಕ್ಷಣ ಗಮನ ಹರಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 16, 2026 12:57 PM
Loading...
Unable to load recommendations.
Follow Us
