ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಬೇಜವಾಬ್ದಾರಿ: ರೋಗಿಗಳ ವ್ಹೀಲ್ ಚೇರ್‌ನಲ್ಲಿ ಕಸ ಸಾಗಾಟ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳನ್ನು ಕರೆದೊಯ್ಯುವ ವ್ಹೀಲ್ ಚೇರ್‌ನಲ್ಲಿ ಕಸ ಸಾಗಿಸಿರುವ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸಿಬ್ಬಂದಿಯ ಬೇಜವಾಬ್ದಾರಿತನದ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಸಿಬ್ಬಂದಿಯ ಬೇಜವಾಬ್ದಾರಿತನದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಹ ಹಂಚಿಕೆಯಾಗಿದ್ದು, ವೈರಲ್ ಆಗುತ್ತಿದೆ.
ನೆಲಮಂಗಲ, ಅಕ್ಟೋಬರ್ 28: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳನ್ನು ಕರೆದೊಯ್ಯಲು ಬಳಸುವ ವ್ಹೀಲ್ ಚೇರ್‌ನಲ್ಲಿ ಆಸ್ಪತ್ರೆ ಹೊರಭಾಗದ ಕಳೆ ಕಿತ್ತ ನಂತರ ಕಸದ ರಾಶಿಯನ್ನು ಸಾಗಿಸಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಆಸ್ಪತ್ರೆಯ ಆವರಣದಲ್ಲಿದ್ದ ಕಸವನ್ನು ಸಿಬ್ಬಂದಿ ರೋಗಿಗಳ ಚೇರ್‌ನಲ್ಲಿ ಸಾಗಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ರೋಗಿಗಳ ಅನುಕೂಲಕ್ಕಾಗಿ ಬಳಸಬೇಕಾದ ವ್ಹೀಲ್ ಚೇರ್‌ಗಳನ್ನು ಕಸ ಸಾಗಿಸಲು ಬಳಸಿರುವುದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೇ ಇಂತಹ ಬೇಜವಾಬ್ದಾರಿತನ ತೋರಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us

