ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಬೇಜವಾಬ್ದಾರಿ: ರೋಗಿಗಳ ವ್ಹೀಲ್ ಚೇರ್‌ನಲ್ಲಿ ಕಸ ಸಾಗಾಟ!

Edited By:

Updated on: Oct 28, 2026 | 10:16 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳನ್ನು ಕರೆದೊಯ್ಯುವ ವ್ಹೀಲ್ ಚೇರ್‌ನಲ್ಲಿ ಕಸ ಸಾಗಿಸಿರುವ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸಿಬ್ಬಂದಿಯ ಬೇಜವಾಬ್ದಾರಿತನದ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಸಿಬ್ಬಂದಿಯ ಬೇಜವಾಬ್ದಾರಿತನದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಹ ಹಂಚಿಕೆಯಾಗಿದ್ದು, ವೈರಲ್ ಆಗುತ್ತಿದೆ.

ನೆಲಮಂಗಲ, ಅಕ್ಟೋಬರ್ 28: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳನ್ನು ಕರೆದೊಯ್ಯಲು ಬಳಸುವ ವ್ಹೀಲ್ ಚೇರ್‌ನಲ್ಲಿ ಆಸ್ಪತ್ರೆ ಹೊರಭಾಗದ ಕಳೆ ಕಿತ್ತ ನಂತರ ಕಸದ ರಾಶಿಯನ್ನು ಸಾಗಿಸಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಆಸ್ಪತ್ರೆಯ ಆವರಣದಲ್ಲಿದ್ದ ಕಸವನ್ನು ಸಿಬ್ಬಂದಿ ರೋಗಿಗಳ ಚೇರ್‌ನಲ್ಲಿ ಸಾಗಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ರೋಗಿಗಳ ಅನುಕೂಲಕ್ಕಾಗಿ ಬಳಸಬೇಕಾದ ವ್ಹೀಲ್ ಚೇರ್‌ಗಳನ್ನು ಕಸ ಸಾಗಿಸಲು ಬಳಸಿರುವುದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೇ ಇಂತಹ ಬೇಜವಾಬ್ದಾರಿತನ ತೋರಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More