ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7 ಜನರ ಬಲಿ ಪಡೆದ ಜಾಗ ಈಗ ಹೇಗಿದೆ ನೋಡಿ
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ್ದಾರೆ. ಗೋಡೆಯ ಅಂಚಿನಲ್ಲಿ ಮಣ್ಣು ಸುರಿದು, ಗಿಡಗಳನ್ನು ನೆಟ್ಟು ಗೋಡೆಯನ್ನು ದುರ್ಬಲಗೊಳಿಸಿದ್ದು ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನೆಯ ಬಗ್ಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ನಿರ್ಲಕ್ಷ್ಯದ ಕುರಿತು ತನಿಖೆ ನಡೆಯುತ್ತಿದೆ.
ಬೆಂಗಳೂರು, ಏಪ್ರಿಲ್ 30: ನಗರದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು, ಸುಮಾರು 15 ಜನರು ಗಾಯಗೊಂಡಿದ್ದಾರೆ. ಆಸ್ಪತ್ರೆ ಆವರಣದ ಖಾಲಿ ಜಾಗದಲ್ಲಿ ಮಣ್ಣನ್ನು ಅಗೆದು ಗೋಡೆಯ ಅಂಚಿಗೆ ಸುರಿದಿದ್ದು, ಅಲ್ಲದೆ ಗೋಡೆಯ ಸುತ್ತಲೂ ಗಿಡಗಳನ್ನು ನೆಟ್ಟಿರುವುದು ಗೋಡೆಯನ್ನು ದುರ್ಬಲಗೊಳಿಸಿತ್ತು ಎಂದು ತಿಳಿದುಬಂದಿದೆ. ಇದರ ಪರಿಣಾಮವಾಗಿ, ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ನೀರು ಗೋಡೆಯ ಮೇಲೆ ಒತ್ತಡ ಹೇರಿದ್ದರಿಂದ ಗೋಡೆ ಕುಸಿದಿದೆ. ಗೋಡೆಯ ಪಕ್ಕದಲ್ಲಿ ಆಶ್ರಯ ಪಡೆದಿದ್ದ ಜನರು ಮತ್ತು ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಕೆಲವು ವ್ಯಾಪಾರಿಗಳು ಈ ದುರಂತಕ್ಕೆ ಬಲಿಯಾಗಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
