ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್

ಅರುಣ್​ ಕುಮಾರ್​ ಬೆಳ್ಳಿ

Updated on: May 01, 2024 | 1:27 PM

ಆದರೆ ರಾಜ್ಯ ಸರ್ಕಾರ ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ತಳೆದಿರುವುದನ್ನು ಬಿಜೆಪಿ ಖಂಡಿಸುತ್ತದೆ, ಬಾಂಬ್ ಸ್ಪೋಟ ಆದಾಗ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದರೂ ಸರ್ಕಾರ ಹೇಗೆ ಪ್ರತಿಕ್ರಿಯಿಸಿತು ಅಂತ ಗೊತ್ತಿದೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ದುರದೃಷ್ಟಕರ ಮತ್ತು ವಿಡಿಯೋಗಳ ಮೂಲಕ ಹೆಣ್ಣುಮಕ್ಕಳ ಮಾನ ಬೀದಿಗೆ ಬಂದಿರುವುದನ್ನು ತಾವು ಖಂಡಿಸುತ್ತೇವೆ ಎಂದು ಮಾಳವಿಕಾ ಹೇಳಿದರು.

ಬೆಳಗಾವಿ: ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಳವಿಕಾ ಅವಿನಾಶ್ (Malavika Avinash) ಅವರು ಪ್ರಜ್ವಲ್ ರೇವಣ್ಣ (Prajwal Revanna) ಜೂನ್ 4 ರವರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಸಂಸದರಾಗಿರುತ್ತಾರೆ ಮತ್ತು ಒಂದು ಪಕ್ಷ ಗೆದ್ದರೆ ಎನ್ ಡಿ ಎ (NDA) ಒಕ್ಕೂಟದ ಸಂಸದರಾಗುತ್ತಾರೆ ಎಂದು ಹೇಳಿದರು. ಪ್ರಜ್ವಲ್ ಜೆಡಿಎಸ್ ಪಕ್ಷದವಾರಾಗಿರುವುದರಿಂದ ಆ ಪಕ್ಷದ ನಾಯಕತ್ವ ಅವರನ್ನು 6 ವರ್ಷಗಳಲ ಅವಧಿಗೆ ಉಚ್ಛಾಟನೆ ಮಾಡಿದೆ ಮತ್ತು ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಿರುವುದರಿಂದ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸುತ್ತಾರೆ ಎಂದು ಮಾಳವಿಕಾ ಹೇಳಿದರು. ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ್ದ ಮಾಳವಿಕಾ ಈ ಪ್ರಕರಣದಲ್ಲಿ ಯಾಕೆ ಸಂತ್ರಸ್ತೆಯರ ಪರ ಧ್ವನಿ ಎತ್ತುತ್ತಿಲ್ಲ, ಅಂತ ಕೇಳಿದ್ದಕ್ಕೆ ಅವರು, ನೇಹಾ ಕಾಲೇಜು ಆವರಣದಲ್ಲಿ ಬರ್ಬರವಾಗಿ ಹತ್ಯೆಯಾದಳು, ಆ ಪ್ರಕರಣವೇ ಬೇರೆ. ಆದರೆ ರಾಜ್ಯ ಸರ್ಕಾರ ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ತಳೆದಿರುವುದನ್ನು ಬಿಜೆಪಿ ಖಂಡಿಸುತ್ತದೆ, ಬಾಂಬ್ ಸ್ಪೋಟ ಆದಾಗ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದರೂ ಸರ್ಕಾರ ಹೇಗೆ ಪ್ರತಿಕ್ರಿಯಿಸಿತು ಅಂತ ಗೊತ್ತಿದೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ದುರದೃಷ್ಟಕರ ಮತ್ತು ವಿಡಿಯೋಗಳ ಮೂಲಕ ಹೆಣ್ಣುಮಕ್ಕಳ ಮಾನ ಬೀದಿಗೆ ಬಂದಿರುವುದನ್ನು ತಾವು ಖಂಡಿಸುತ್ತೇವೆ ಎಂದು ಮಾಳವಿಕಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಮಗೆ ಸಿಐಡಿ ಮೇಲೆ ನಂಬಿಕೆ ಇಲ್ಲ, ನೇಹಾ ಹಿರೇಮಠ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಮಾಳವಿಕಾ ಅವಿನಾಶ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.