AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣರನ್ನು ಸಂಪರ್ಕಿಸಿಲ್ಲ ಮತ್ತು ಅವರು ನನ್ನ ಸಂಪರ್ಕದಲ್ಲಿಲ್ಲ: ನಿಖಿಲ್ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣರನ್ನು ಸಂಪರ್ಕಿಸಿಲ್ಲ ಮತ್ತು ಅವರು ನನ್ನ ಸಂಪರ್ಕದಲ್ಲಿಲ್ಲ: ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: May 10, 2024 | 1:48 PM

ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ, ಪ್ರಕರಣ ಬೆಳಕಿಗೆ ಬಂದ ದಿನವೇ ಹಾಸನದ ಸಂಸದರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರು ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿ ಪಕ್ಷದಿಂದ ಉಚ್ಛಾಟಿಸಿದ್ದಾರೆ, ಎಂದು ನಿಖಿಲ್ ಹೇಳಿದರು.

ಮಂಡ್ಯ: ನಗರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪ್ರಜ್ವಲ್ ರೇವಣ್ಣ ಪ್ರಕರಣದ (Prajwal Revanna) ತನಿಖೆ ವಿನಾಕಾರಣ ವಿಳಂಬಗೊಳ್ಳುತ್ತಿದೆ, ಪ್ರಕರಣದ ಸತ್ಯಾಸತ್ಯತೆ ಅರಿಯಲು ಜನ ತವಕಗೊಂಡಿದ್ದಾರೆ, ಕಳೆದ 15 ದಿನಗಳಿಂದ ಮೊಬೈಲ್, ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಬರೀ ಇದೇ ವಿಚಾರ ನೋಡಸಿಗುತ್ತಿದೆ ಆದರೆ ತನಿಖೆಯ ವೇಗ ಮಾತ್ರ ಹೆಚ್ಚಿಲ್ಲ ಎಂದು ಹೇಳಿದರು. ಇದೇ ಕಾರಣಕ್ಕೆ ಜೆಡಿಎಸ್ ನಾಯಕರು (JDS leaders) ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು. ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ, ಪ್ರಕರಣ ಬೆಳಕಿಗೆ ಬಂದ ದಿನವೇ ಹಾಸನದ ಸಂಸದರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರು ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿ ಪಕ್ಷದಿಂದ ಉಚ್ಛಾಟಿಸಿದ್ದಾರೆ, ಎಂದು ನಿಖಿಲ್ ಹೇಳಿದರು. ಸಂತ್ರಸ್ತೆಯರ ಬಗ್ಗೆ ಯಾರೂ ಯೋಚನೆ ಮಾಡುತ್ತಿಲ್ಲ, ಪೆನ್ ಡ್ರೈವ್ ಗಳನ್ನು ಹಂಚಿದ್ಯಾರು ಅಂತ ಜನಕ್ಕೆ ಗೊತ್ತಾಗಬೇಕಿದೆ, ಹಂಚಿದವರು ಮಹಿಳೆಯರ ಮುಖವನ್ನೂ ಬ್ಲರ್ ಮಾಡಿಲ್ಲ, ಈ ಆಯಾಮದಲ್ಲಿ ತನಿಖೆ ಮಾಡೋದು ಎಸ್ಐಟಿಗೆ ಸಾಧ್ಯವಾಗುತ್ತಿಲ್ಲವಾದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಅಂತ ನಾವು ಹೇಳುತ್ತಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು. ಅಲ್ಲಿಂದ ಹೊರಡುವ ಮೊದಲು ಅವರು ಪ್ರಜ್ವಲ್ ರೇವಣ್ಣರನ್ನು ಸಂಪರ್ಕಿಸಿಲ್ಲ, ಅವರು ತನ್ನ ಸಂಪರ್ಕದಲ್ಲಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್​: ವಿಡಿಯೋ ನೋಡೋ ಧೈರ್ಯ ಬರಲಿಲ್ಲ, ನಿಖಿಲ್ ಕುಮಾರಸ್ವಾಮಿ