ನಾರಾಯಣಗೌಡ ಮತ್ತು ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 06, 2023 | 5:40 PM

ಪಕ್ಷ ತೊರೆದು ಹೋದವರು ವಾಪಸ್ಸು ಬರಲಿಚ್ಛಿಸಿದರೆ ವರಿಷ್ಟರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಸಚಿವ ಕೆಸಿ ನಾರಾಯಣಗೌಡ (KC Narayana Gowda) ಅವರ ಸೇರ್ಪಡೆಗೆ ಮಂಡ್ಯ ಮತ್ತು ಕೆಆರ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳುವ ಪ್ರಕಾರ ನಾರಾಯಣಗೌಡ ಕಾಂಗ್ರೆಸ್ ಸೇರುವ ಬಗ್ಗೆ ತನ್ನೊಂದಿಗೆ ಯಾವತ್ತೂ ಚರ್ಚಿಸಿಲ್ಲ, ಕಾರ್ಯಕರ್ತರಿಗೆ ಏನು ಮಾಹಿತಿ ಸಿಕ್ಕಿದೆಯೋ ತನಗೆ ಗೊತ್ತಿಲ್ಲ ಎಂದು ಶಿವಕುಮಾರ್ ಹೇಳಿದರು. ಮತ್ತೊಬ್ಬ ಸಚಿವ ವಿ ಸೋಮಣ್ಣ (V Somanna) ಅವರು ಸಹ ಪಕ್ಷ ಸೇರುವ ಬಗ್ಗೆ ತಮ್ಮೊಂದಿಗೆ ಮಾತಾಡಿಲ್ಲ ಎಂದ ಅವರು ಕನಕಪುರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಿ ಪತ್ರವೊಂದನ್ನು ಬರೆದಿದ್ದಾರೆ ಎಂದು ಹೇಳಿದರು. ಪಕ್ಷ ತೊರೆದು ಹೋದವರು ವಾಪಸ್ಸು ಬರಲಿಚ್ಛಿಸಿದರೆ ವರಿಷ್ಟರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.