Assembly Polls: ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಬೇಕೆಂದು ಸಲಹೆ ನೀಡುವಷ್ಟು ಹಿರಿತನ ಕೆ ಎನ್ ರಾಜಣ್ಣಗಾಗಲೀ, ನನಗಾಗಲೀ ಇಲ್ಲ: ಎಮ್ ಬಿ ಪಾಟೀಲ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 1:47 PM

ಅವರಿಗೆ ಯಾವ ಕ್ಷೇತ್ರ ಸೂಕ್ತ ಅಂತ ಸಲಹೆ ನೀಡುವಷ್ಟು ಹಿರಿತನ ತನಗಾಗಲೀ, ಕೆ ಎನ್ ರಾಜಣ್ಣಗಾಗಲೀ ಇಲ್ಲ, ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಪಾಟೀಲ್ ಹೇಳಿದರು.

ಬೆಂಗಳೂರು:  ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ (Siddaramaiah) ಕೋಲಾರದಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಹೈಕಮಾಂಡ್ (high command) ಅನುಮತಿ ನೀಡಿದರೆ ಮುಂದುವರಿಯತ್ತಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಮ್ ಬಿ ಪಾಟೀಲ್ (MB Patil) ಇಂದು ಬೆಂಗಳೂರಲ್ಲಿ ಹೇಳಿದರು. ನಗರದಲ್ಲಿ ಪತ್ರಿಕಾ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಪಾಟೀಲ್ ಸಿದ್ದರಾಮಯ್ಯ ಒಬ್ಬ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿಯಾಗಿದ್ದಾರೆ, ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಅವರಿಗೆ ಯಾವ ಕ್ಷೇತ್ರ ಸೂಕ್ತ ಅಂತ ಸಲಹೆ ನೀಡುವಷ್ಟು ಹಿರಿತನ ತನಗಾಗಲೀ, ಕೆ ಎನ್ ರಾಜಣ್ಣಗಾಗಲೀ ಇಲ್ಲ, ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.