ನಳಿನ್ ಕುಮಾರ್ ಕಟೀಲ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಜಜ್​ಗಳಾ? ಡಿಕೆ ಶಿವಕುಮಾರ್, ಡಿಸಿಎಂ

ಅರುಣ್​ ಕುಮಾರ್​ ಬೆಳ್ಳಿ

Updated on: Oct 18, 2023 | 4:53 PM

ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣದಲ್ಲಿ ಶಿವಕುಮಾರ ಪಾತ್ರವಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಅಂತ ಪತ್ರಕರ್ತರೊಬ್ಬರು ಹೇಳಿದಾಗ ಕಟೀಲ್ ಜಜ್ಜಾ? ಎಂದು ಮರು ಪ್ರಶ್ನೆ ಹಾಕಿದರು. ನಳಿನ್ ಕುಮಾರ್ ಕಟೀಲ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಇಬ್ಬರೂ ಜಜ್ ಗಳಲ್ಲ ಎಂದು ಶಿವಕುಮಾರ್ ಹೇಳಿದರು.

ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪೀತ ಪತ್ರಿಕೋದ್ಯಮ ನಡೆಸುವ ಮಾಧ್ಯಮಗಳ ವರದಿಗಳನ್ನು ಆಧರಿಸಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು. ಬೆಳಗಾವಿಯಲ್ಲಿ ಈ ಬಾರಿ ವಿಧಾನಸಭಾ ಅಧಿವೇಶನ (Assembly session) ನಡೆಸಲಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್, ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ಸಬೆ ನಡೆಯಲಿದೆ, ಸಭೆಯಲ್ಲಿ ಒಂದು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಶಿವಕುಮಾರ್ ಎರಡನೇ ಬಾರಿಗೆ ಜೈಲಿಗೆ ಹೋಗೋದಿಕ್ಕೆ ತಯಾರಿ ಮಾಡಿಕೊಳ್ಳಬೇಕು, ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣದಲ್ಲಿ ಶಿವಕುಮಾರ ಪಾತ್ರವಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದ್ದಾರೆ ಅಂತ ಪತ್ರಕರ್ತರೊಬ್ಬರು ಹೇಳಿದಾಗ ಕಟೀಲ್ ಜಜ್ಜಾ? ಎಂದು ಮರು ಪ್ರಶ್ನೆ ಹಾಕಿದರು. ನಳಿನ್ ಕುಮಾರ್ ಕಟೀಲ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಇಬ್ಬರೂ ಜಜ್ ಗಳಲ್ಲ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.