Loading video

ನಿರುದ್ಯೋಗ ಹೋಗಲಾಡಿಸಲು ನಮ್ಮ ಸರ್ಕಾರಕ್ಕೂ ಆಗಲಿಲ್ಲ, ಮೋದಿಗೂ ಸಾಧ್ಯವಾಗಲಿಲ್ಲ; ರಾಹುಲ್ ಗಾಂಧಿ

Updated on: Feb 03, 2025 | 4:54 PM

ನಾವು ಸ್ವಲ್ಪ ನಿಧಾನವಾಗಿ ಬೆಳೆಯುತ್ತಿದ್ದೇವೆ. ಆದರೆ, ನಾವು ಬೆಳೆಯುತ್ತಿದ್ದೇವೆ. ನಾವು ಎದುರಿಸುತ್ತಿರುವ ಸಾರ್ವತ್ರಿಕ ಸಮಸ್ಯೆಯೆಂದರೆ ನಿರುದ್ಯೋಗ ಸಮಸ್ಯೆಯನ್ನು ನಿಭಾಯಿಸಲು ನಮಗೆ ಸಾಧ್ಯವಾಗುತ್ತಿಲ್ಲ. ನಮ್ಮ ಯುಪಿಎ ಸರ್ಕಾರವಾಗಲಿ ಅಥವಾ ಇಂದಿನ ಎನ್‌ಡಿಎ ಸರ್ಕಾರವಾಗಲಿ ಈ ದೇಶದ ಯುವಕರಿಗೆ ಉದ್ಯೋಗದ ಬಗ್ಗೆ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ ಎಂಬುದನ್ನು ನಿರಾಕರಿಸಲು ಸಾಧ್ಯವೇ ಇಲ್ಲ ಎಂದು ರಾಹುಲ್ ಗಾಂಧಿ ಸಂಸತ್ ಅಧಿವೇಶನದ ಭಾಷಣದಲ್ಲಿ ಹೇಳಿದ್ದಾರೆ.

ನವದೆಹಲಿ: ಇಂದು ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭಗೊಂಡಾಗ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಿರುದ್ಯೋಗ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸದಿದ್ದಕ್ಕಾಗಿ ಹಿಂದಿನ ಯುಪಿಎ ಸರ್ಕಾರವನ್ನು ಕೂಡ ದೂಷಿಸಿದರು. ಈ ದೇಶದಲ್ಲಿ ಇಂದಿಗೂ ಜ್ವಲಂತವಾಗಿರುವ ನಿರುದ್ಯೋಗ ಸಮಸ್ಯೆಗೆ ಪರಿಹಾರ ನೀಡಲು ನಮ್ಮ ಯುಪಿಎ ಸರ್ಕಾರಕ್ಕೂ ಸಾಧ್ಯವಾಗಲಿಲ್ಲ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಹಾಗೇ, ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಕೂಡ ನಿರುದ್ಯೋಗಕ್ಕೆ ಪರಿಹಾರ ನೀಡುವಲ್ಲಿ ಸೋತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮ ಒಳ್ಳೆಯ ಐಡಿಯಾ ಎಂದು ನಾನು ಒಪ್ಪುತ್ತೇನೆ. ನಾನು ಪ್ರಧಾನಿ ನರೇಂದ್ರ ಮೋದಿಯನ್ನು ದೂಷಿಸುತ್ತಿಲ್ಲ. ಅವರು ಪ್ರಯತ್ನಿಸಲಿಲ್ಲ ಎಂದು ಹೇಳುವುದು ನ್ಯಾಯವಲ್ಲ. ಪ್ರಧಾನಿ ಮೇಕ್ ಇನ್ ಇಂಡಿಯಾ ಯಶಸ್ವಿಯಾಗಲು ಪ್ರಯತ್ನಿಸಿದರು, ಆದರೆ ಅವರು ವಿಫಲರಾದರು. ಭಾರತೀಯ ನೆಲದಲ್ಲಿ ಚೀನಾದ ಸೈನ್ಯದ ಉಪಸ್ಥಿತಿಗೆ ‘ಮೇಕ್-ಇನ್-ಇಂಡಿಯಾ’ ಉಪಕ್ರಮ ನೇರ ಹೊಣೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ