ಪ್ರಾಜೆಕ್ಟ್ ವರ್ಕ್‌ಗೆ ತೆರಳುತ್ತಿದ್ದ ವೇಳೆ ಕಾರಿನ ಟೈರ್ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಸಾವು; ಹೆತ್ತವರ ಆಕ್ರಂದನ

Edited By:

Updated on: Nov 17, 2026 | 12:02 PM

ನೆಲಮಂಗಲದ ಗುಡೇಮಾರನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಪ್ತಗಿರಿ ಕಾಲೇಜಿನ ವೈಷ್ಣವಿ (19) ಮತ್ತು ಜಾನವಿ (19) ಎಂಬ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಕಾರಿನ ಟೈರ್ ಸ್ಪೋಟಗೊಂಡ ಕಾರಣ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿನಿಯರು ಪ್ರಾಜೆಕ್ಟ್‌ ಕೆಲಸಕ್ಕಾಗಿ ಕುಣಿಗಲ್ ಉತ್ತರಿ ಬೆಟ್ಟಕ್ಕೆ ತೆರಳುತ್ತಿದ್ದರು.

ನೆಲಮಂಗಲ, ನ.17: ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿನಿಯರು ದುರಂತ ಸಾವನ್ನಪ್ಪಿದ್ದಾರೆ. ಕಾರಿನ ಟೈರ್ ಸ್ಪೋಟಗೊಂಡ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ವಿದ್ಯಾರ್ಥಿನಿಯರನ್ನು 19 ವರ್ಷದ ವೈಷ್ಣವಿ ಮತ್ತು ಜಾನವಿ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿನಿಯರಾಗಿದ್ದರು. ಘಟನೆಯ ಸಮಯದಲ್ಲಿ, ವಿದ್ಯಾರ್ಥಿನಿಯರು ತಮ್ಮ ಕಾಲೇಜಿನ ಪ್ರಾಜೆಕ್ಟ್‌ ಕೆಲಸದ ನಿಮಿತ್ತ ಕುಣಿಗಲ್ ಉತ್ತರಿ ಬೆಟ್ಟಕ್ಕೆ ಪ್ರಯಾಣಿಸುತ್ತಿದ್ದರು. ಸಂಭವಿಸಿದ ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಮತ್ತು ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿ ಸಮುದಾಯದಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಅಪಘಾತದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 17, 2026 12:01 PM
Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More