AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ

ಅಕ್ಷಯ್​ ಪಲ್ಲಮಜಲು​​
|

Updated on:Aug 22, 2026 | 4:40 PM

Share

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತ ಪಾರ್ಕಿಂಗ್‌ ವಾಹನ ಸವಾರರಿಗೆ ಮಾರಕವಾಗಿದೆ. ಕಳೆದ ಮೂರು ದಿನಗಳಲ್ಲಿ ಮೂರು ಭೀಕರ ಅಪಘಾತಗಳು ಸಂಭವಿಸಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ ವಾಹನಗಳಿಂದಾಗಿ ಚಲಿಸುವವರಿಗೆ ಅಡೆತಡೆಯುಂಟಾಗಿ ಅಪಘಾತಗಳು ಹೆಚ್ಚುತ್ತಿವೆ. ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಅಕ್ರಮ ಪಾರ್ಕಿಂಗ್‌ಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ.

ನೆಲಮಂಗಲ, ಆ.22: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಹಾಗೂ ಅವೈಜ್ಞಾನಿಕವಾಗಿ ವಾಹನಗಳನ್ನು ಪಾರ್ಕ್ ಮಾಡುತ್ತಿರುವುದು ವಾಹನ ಸವಾರರ ಪಾಲಿಗೆ ಯಮಸ್ವರೂಪಿಯಾಗಿ ಪರಿಣಮಿಸಿದೆ. ನೆಲಮಂಗಲ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿಯ ಪಾರ್ಕಿಂಗ್‌ನಿಂದಾಗಿ ಕಳೆದ ಮೂರೇ ದಿನಗಳಲ್ಲಿ ಮೂರು ಭೀಕರ ಅಪಘಾತಗಳು ಸಂಭವಿಸಿದ್ದು, ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಗುರುವಾರದಂದು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ದರ್ಶನ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶುಕ್ರವಾರ ಚಲಿಸುತ್ತಿದ್ದ ವಾಹನಕ್ಕೆ ಹಸು ಅಡ್ಡ ಬಂದಾಗ, ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳ ಮರೆಯಲ್ಲಿ ಎದುರಿನ ಹಾದಿ ಸ್ಪಷ್ಟವಾಗಿ ಕಾಣದೆ ವಿನೋದ್ ಎಂಬುವವರು ಅಪಘಾತಕ್ಕೀಡಾಗಿ ಜೀವ ಕಳೆದುಕೊಂಡಿದ್ದಾರೆ. ರಸ್ತೆ ದಾಟುತ್ತಿದ್ದ ವೇಳೆ ಪಾರ್ಕ್ ಮಾಡಿದ್ದ ಬೃಹತ್ ವಾಹನಗಳ ಮರೆಯಿಂದ ಬರುತ್ತಿದ್ದ ವಾಹನ ಗೋಚರಿಸದೆ ಸಂಜೀವ್ ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೆದ್ದಾರಿ ನಿಯಮಗಳನ್ನು ಗಾಳಿಗೆ ತೂರಿ ರಸ್ತೆ ಪಕ್ಕದಲ್ಲೇ ಲಾರಿ ಹಾಗೂ ಭಾರಿ ವಾಹನಗಳನ್ನು ಸಾಲಾಗಿ ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ವೇಗವಾಗಿ ಬರುವ ವಾಹನ ಸವಾರರಿಗೆ ರಸ್ತೆ ದಾಟುವವರು, ಅಡ್ಡ ಬರುವ ಪ್ರಾಣಿಗಳು ಅಥವಾ ನಿಂತಿರುವ ವಾಹನಗಳು ತಕ್ಷಣಕ್ಕೆ ಗೋಚರಿಸುತ್ತಿಲ್ಲ. ಸರಣಿ ಸಾವುಗಳು ಸಂಭವಿಸುತ್ತಿದ್ದರೂ ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೆ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಪಕ್ಕದ ಅಕ್ರಮ ಪಾರ್ಕಿಂಗ್‌ಗೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 22, 2026 04:40 PM

Follow Us