AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ಬೆಚ್ಚಿಬಿದ್ದ ಭೋವಿಪಾಳ್ಯ ಗ್ರಾಮಸ್ಥರು!

ನೆಲಮಂಗಲ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ಬೆಚ್ಚಿಬಿದ್ದ ಭೋವಿಪಾಳ್ಯ ಗ್ರಾಮಸ್ಥರು!

ಅಕ್ಷಯ್​ ಪಲ್ಲಮಜಲು​​
|

Updated on:Apr 29, 2026 | 8:54 PM

Share

ನೆಲಮಂಗಲ ತಾಲ್ಲೂಕಿನ ಬೂದಿಹಾಲ್‌ನ ಭೋವಿಪಾಳ್ಯದಲ್ಲಿ ಭಾರಿ ಮಳೆಯ ನಡುವೆ ಆತಂಕಕಾರಿ ಘಟನೆಯೊಂದು ನಡೆದಿದೆ. ಬುಧವಾರ ಸಂಜೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದಾಗ, ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ. ಬೆಂಕಿ ಉರಿಯುತ್ತಿದ್ದ ದೃಶ್ಯವನ್ನು ಕಂಡ ಗ್ರಾಮಸ್ಥರು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಇನ್ನು ಬೆಂಗಳೂರಿನ ಅನೇಕ ಕಡೆ ಭಾರೀ ಮಳೆಯಾಗಿದೆ. ಈ ಮಳೆಯ ಅವಾಂತರದಿಂದ 7 ಜನ ಸಾವನ್ನಪ್ಪಿದ್ದಾರೆ.

ನೆಲಮಂಗಲ, ಏ.29: ತಾಲ್ಲೂಕಿನಾದ್ಯಂತ ಸಂಜೆ ಸುರಿದ ಭಾರಿ ಮಳೆಯ ನಡುವೆ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಬೂದಿಹಾಲ್‌ನ ಭೋವಿಪಾಳ್ಯದಲ್ಲಿ ನಡೆದಿದೆ. ಬೆಂಕಿ ಉರಿಯುತ್ತಿದ್ದ ದೃಶ್ಯ ಕಂಡು ಗ್ರಾಮಸ್ಥರು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಬುಧವಾರ ಸಂಜೆ ನೆಲಮಂಗಲ ಸುತ್ತಮುತ್ತ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿತ್ತು. ಈ ವೇಳೆ ಭೋವಿಪಾಳ್ಯ ಗ್ರಾಮದ ತೆಂಗಿನ ಮರವೊಂದಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲು ಬಡಿದ ರಭಸಕ್ಕೆ ಮರದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಮರವು ಹೊತ್ತಿ ಉರಿಯತೊಡಗಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 29, 2026 08:53 PM
Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More