ಹಣ ಕಟ್ಟುವ ವಿಚಾರಕ್ಕೆ ಗಲಾಟೆ: ಟೋಲ್​ ಸಿಬ್ಬಂದಿಯ ಬಟ್ಟೆ ಬಿಚ್ಚಿಸಿ ವಾಹನ ಸವಾರರಿಂದ ಥಳಿತ

ಬಿ ಮೂರ್ತಿ, ನೆಲಮಂಗಲ Edited By:

Updated on: May 04, 2024 | 10:45 PM

ಟೋಲ್ ಹಣ ಕಟ್ಟುವ ವಿಚಾರವಾಗಿ ವಾಹನ ಸವಾರರಿಂದ ಟೋಲ್ ಸಿಬ್ಬಂದಿಯ ಬಟ್ಟೆ ಬಿಚ್ಚಿಸಿ ಹಿಗ್ಗಾ ಮುಗ್ಗಾ ಥಳಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನವಯುಗ ಟೋಲ್ ನಲ್ಲಿ ನಡೆದಿದೆ. ನಾವು ಲೋಕಲ್​. ನಮ್ಮ ಕಾರುಗಳಿಗೆ ಟೋಲ್ ಹಣ ಕೇಳುತ್ತೀರಾ ಎಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ನೆಲಮಂಗಲ, ಮೇ 04: ಟೋಲ್ ಹಣ ಕಟ್ಟುವ ವಿಚಾರವಾಗಿ ವಾಹನ ಸವಾರರಿಂದ ಟೋಲ್ ಸಿಬ್ಬಂದಿಯ (Toll staff) ಬಟ್ಟೆ ಬಿಚ್ಚಿಸಿ ಹಿಗ್ಗಾ ಮುಗ್ಗಾ ಥಳಿಸಿರುವಂತಹ (beaten) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನವಯುಗ ಟೋಲ್ ನಲ್ಲಿ ನಡೆದಿದೆ. ನಾವು ಲೋಕಲ್​. ನಮ್ಮ ಕಾರುಗಳಿಗೆ ಟೋಲ್ ಹಣ ಕೇಳುತ್ತೀರಾ ಎಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ತೇಜಸ್, ಶರತ್ ಎಂಬುವವರಿಂದ ಹಲ್ಲೆ ಮಾಡಲಾಗಿದ್ದು, ಇಬ್ಬರನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯ ವಿಡಿಯೋ ಟೋಲ್ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,