AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ಗಂಗಾಧರ​ ಬ. ಸಾಬೋಜಿ
|

Updated on: Mar 14, 2026 | 6:20 PM

Share

ನೆಲಮಂಗಲದ ಬಿಲಾಲ್ ನಗರದ ತೋಟದ ಶೆಡ್ ಬಳಿ ಆರು ರಾಷ್ಟ್ರಪಕ್ಷಿ ನವಿಲುಗಳ ಕಳೇಬರ ಪತ್ತೆಯಾಗಿದೆ. ಒಂದೇ ಜಾಗದಲ್ಲಿ ಸಾವು ಸಂಭವಿಸಿರುವುದು ವಿಷ ಪ್ರಾಶನದಿಂದಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.

ನೆಲಮಂಗಲ, ಮಾರ್ಚ್​​ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More