ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು

Edited By:

Updated on: Oct 04, 2026 | 4:45 PM

ಮುಖ್ಯಾಂಶಗಳು

  • ನೆಲಮಂಗಲದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ
  • ದೇವಿಯ ಮೇಲಿನ 14 ಗ್ರಾಂ ಚಿನ್ನದ ತಾಳಿಗೆ ಕನ್ನ
  • ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆಲಮಂಗಲದ ತ್ಯಾಗದಹಳ್ಳಿ ಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳರು ದೇವರ ವಿಗ್ರಹದ ಮೇಲಿನ 1.5 ಲಕ್ಷ ಮೌಲ್ಯದ ಚಿನ್ನದ ತಾಳಿ, ಬೆಳ್ಳಿ ಮುಖವಾಡ ಮತ್ತು ಹುಂಡಿ ಹಣವನ್ನು ದೋಚಿದ್ದಾರೆ. ಬಾಗಿಲು ಮುರಿದು ಒಳನುಗ್ಗಿದ ಖದೀಮರು ಗ್ರಾಮಸ್ಥರ ಭಕ್ತಿಯ ಪ್ರತೀಕವಾದ ಆಭರಣಗಳನ್ನು ಕದ್ದೊಯ್ದಿದ್ದಾರೆ. ನೆಲಮಂಗಲದಲ್ಲಿ ಹೆಚ್ಚಿದ ಕಳ್ಳತನದ ಪ್ರಕರಣಗಳಲ್ಲಿ ಇದೂ ಒಂದು. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ನೆಲಮಂಗಲ, ಅಕ್ಟೋಬರ್​​ 04: ನೆಲಮಂಗಲ ಭಾಗದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಪೊಲೀಸರು ಎಷ್ಟೇ ಪ್ರಯತ್ನ ಪಟ್ಟರೂ ಕಳ್ಳರನ್ನ ಸದೆಬಡಿಯುವುದು ಕಷ್ಟವಾಗಿದೆ. ಮೇಲಿಂದ ಮೇಲೆ ಕಳ್ಳತನ ನಡೆಯುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ದೇವರ ವಿಗ್ರಹದ ಮೇಲಿನ ತಾಳಿಯನ್ನೂ ಬಿಡದೆ ಎಲ್ಲವನ್ನು ಖದೀಮರು ಕದ್ದೊಯ್ದಿರುವ ಘಟನೆ ನೆಲಮಂಗಲ ತಾಲೂಕಿನ ತ್ಯಾಗದಹಳ್ಳಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಲಕ್ಷ್ಮೀ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ಒಂದುವರೆ ಲಕ್ಷ ರೂ ಮೌಲ್ಯದ 14 ಗ್ರಾಂ ಚಿನ್ನ ಹಾಗೂ ಬೆಳ್ಳಿಯ ಮುಖವಾಡ, ಹುಂಡಿ, ರೇಷ್ಮೆ ಸೀರೆ ಸೇರಿದಂತೆ ಸಿಕ್ಕಿದ್ದನ್ನೆಲ್ಲಾ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More