ನೆಲಮಂಗಲ: ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್, ಕಾರಿನಲ್ಲಿದ್ದ ಕುಟುಂಬ ಪವಾಡಸದೃಶ ಪಾರು

Edited By:

Updated on: Dec 29, 2025 | 5:56 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಕಾಮಗಾರಿ ವೇಳೆ ಟ್ರ್ಯಾಕ್ಟರ್‌ನಿಂದ ಟ್ಯಾಂಕರ್ ಕಳಚಿ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ-ತಾಯಿ ಸೇರಿದಂತೆ ಐವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆಯ ಕುರಿತು ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು, ಡಿ.29: ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಕಾಮಗಾರಿ ಮಾಡಲಾಗುತ್ತಿದ್ದ ರಸ್ತೆಗೆ ನೀರು ಹಾಕುತ್ತಿದ್ದ ವೇಳೆ, ಟ್ರ್ಯಾಕ್ಟರ್​ನಿಂದ ಕಳಚಿ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಇದೀಗ ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ ತಾಯಿ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಇದೀಗ ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ