AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್! ಇದಕ್ಕೆ ಬ್ರೇಕ್ ಹಾಕುವವರು ಯಾರು?

ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್! ಇದಕ್ಕೆ ಬ್ರೇಕ್ ಹಾಕುವವರು ಯಾರು?

ಅಕ್ಷಯ್​ ಪಲ್ಲಮಜಲು​​
|

Updated on: Mar 25, 2026 | 6:47 PM

Share

ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಬ್ಬರು ಯುವಕರು ಅಪಾಯಕಾರಿ ವೀಲಿಂಗ್ ಸ್ಟಂಟ್ ನಡೆಸಿ ಸಂಚಾರ ನಿಯಮ ಉಲ್ಲಂಘಿಸಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಹೆಲ್ಮೆಟ್ ರಹಿತವಾಗಿ ಈ ಕೃತ್ಯ ಎಸಗಿ, ಪಾದಚಾರಿಗಳು ಮತ್ತು ವಾಹನ ಸವಾರರನ್ನು ಭಯಭೀತರಾಗಿಸಿದ್ದಾರೆ. ಇವರ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಾರಣಾಂತಿಕ ಅಪಘಾತಕ್ಕೆ ಕಾರಣವಾಗುವ ಇಂತಹ ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಚಾಲನಾ ಪರವಾನಗಿ ರದ್ದುಪಡಿಸಲು ಆಗ್ರಹಿಸಿದ್ದಾರೆ.

ನೆಲಮಂಗಲ, ಮಾ.25: ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಅತ್ಯಂತ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಸ್ಟಂಟ್ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಈ ಕಿರಾತಕ ಕೃತ್ಯ ನಡೆದಿದ್ದು, ಇತರ ವಾಹನ ಸವಾರರು ಮತ್ತು ಪಾದಚಾರಿಗಳು ಭಯಭೀತರಾಗಿದ್ದಾರೆ. ಇಬ್ಬರು ಯುವಕರು ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಜನನಿಬಿಡ ರಸ್ತೆಯಲ್ಲೇ ಮುಂದಿನ ಚಕ್ರವನ್ನು ಗಾಳಿಯಲ್ಲಿ ಎತ್ತಿ (Wheelie) ಚಲಿಸುವ ಮೂಲಕ ಜೀವದ ಹಂಗು ತೊರೆದು ಸ್ಟಂಟ್ ಮಾಡಿದ್ದಾರೆ. ರಸ್ತೆಯು ಸ್ಟಂಟ್ ಮಾಡುವ ವೇದಿಕೆಯಲ್ಲ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಈ ಯುವಕರ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಸಣ್ಣ ತಪ್ಪು ಸಂಭವಿಸಿದರೂ ಇದು ಮಾರಣಾಂತಿಕ ಅಪಘಾತಕ್ಕೆ ಕಾರಣವಾಗಬಹುದು. ಇಂತಹ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರ ಚಾಲನಾ ಪರವಾನಗಿಯನ್ನು (DL) ರದ್ದುಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು @Karnataka Portfolio ಎಕ್ಸ್​ ಖಾತೆ ಹಂಚಿಕೊಂಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us