ನೆಲಮಂಗಲ: 24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ, ಇಲ್ಲಿದೆ ಭಯಾನಕ ದೃಶ್ಯ

Updated on: Sep 15, 2025 | 11:06 AM

ನೆಲಮಂಗಲದ ಮಾದನಾಯಕನಹಳ್ಳಿಯ ಪ್ರೆಸ್ಟಿಜ್ ಅಪಾರ್ಟ್ಮೆಂಟ್‌ನಿಂದ 26 ವರ್ಷದ ಯುವಕ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಅಲಸೂರಿನ ನಿವಾಸಿಯಾಗಿದ್ದ ಯುವಕ, ಅಕ್ಕನ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಪೊಲೀಸರು ಯುಡಿಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅನಾರೋಗ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ನೆಲಮಂಗಲ, ಸೆಪ್ಟೆಂಬರ್​ 15: ಮಾದನಾಯಕನಹಳ್ಳಿಯಲ್ಲಿರುವ ಪ್ರೆಸ್ಟೀಜ್ ಅಪಾರ್ಟ್ಮೆಂಟ್​​ 24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಲೋಕೆಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.