ನೆಲಮಂಗಲ: ಮೂರು ಎರ್ಟಿಗಾ ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ, ತಪಾಸಣೆ ಮಾಡಿದ ಪೊಲೀಸರಿಗೆ ಕಾದಿತ್ತು ಆಘಾತ
ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಮೂರು ಕಾರುಗಳಲ್ಲಿ 28 ಬ್ಯಾಗ್ಗಳಲ್ಲಿ ಸಾಗಿಸುತ್ತಿದ್ದ ನಿಷೇಧಿತ ಇ-ಸಿಗರೇಟ್ ಪತ್ತೆಯಾಗಿದೆ. ಸದ್ಯ ಅವುಗಳನ್ನು ವಶಪಡಿಸಿಕೊಂಡು 12 ಜನರನ್ನು ವಶಕ್ಕೆ ಪಡೆಯಲಾಗಿದೆ. ವಿಡಿಯೋ ಇಲ್ಲಿದೆ.
ನೆಲಮಂಗಲ, ನವೆಂಬರ್ 13: ದೆಹಲಿಯ ಕೆಂಪುಕೋಟೆ ಸಮೀಪದ ಕಾರು ಸ್ಫೋಟದ ಬೆನ್ನಲ್ಲೇ ಕರ್ನಾಟಕದಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ಮೂರು ಎರ್ಟಿಗಾ ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ. ಇದೇ ವೇಳೆ, 28 ಬ್ಯಾಗ್ಗಳಲ್ಲಿ ಅನುಮಾನಾಸ್ಪದ ವಸ್ತುಗಳ ಸಾಗಾಟ ಮಾಡುತ್ತಿರುವುದು ಗೊತ್ತಾಗಿದೆ. ಕಪ್ಪು ಬ್ಯಾಗ್ಗಳಲ್ಲಿ ಪ್ಯಾಕಿಂಗ್ ಮಾಡಿ ಸಾಗಿಸುತ್ತಿದ್ದ ವಸ್ತುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು, ನಿಷೇಧಿತ ಇ-ಸಿಗರೇಟ್ ಪತ್ತೆಯಾಗಿದೆ. ದೊಡ್ಡ ಸ್ಮಗ್ಲಿಂಗ್ ಜಾಲವೇ ಪತ್ತೆಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಇ-ಸಿಗರೇಟ್ ಸಾಗಾಟ ಮಾಡಲಾಗುತ್ತಿತ್ತು. ಸದ್ಯ ನೆಲಮಂಗಲ ಟೋಲ್ ಬಳಿ ನಿಷೇಧಿತ ಇ-ಸಿಗರೇಟ್ ಬ್ಯಾಗ್ಗಳು ಹಾಗೂ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. 12 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋ ಹಾಗೂ ವರದಿ: ಮಂಜುನಾಥ್, ಟಿವಿ9 ನೆಲಮಂಗಲ