ನೆನಪಿರಲಿ ಪ್ರೇಮ್ ಚಿತ್ರರಂಗಕ್ಕೆ ಕಾಲಿಟ್ಟು 22 ವರ್ಷ; ಕೇಕ್ ಕತ್ತರಿಸಿ ಸಂಭ್ರಮಿಸಿದ ತಂಡ

Updated on: Feb 01, 2024 | 11:28 AM

ಪ್ರೇಮ್ ಅಭಿನಯದ ‘ಅಪ್ಪಾ ಐ ಲವ್​ ಯೂ’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ ಪ್ರೇಮ್ ಅವರ 22 ವರ್ಷಗಳ ಸಿನಿ ಜರ್ನಿಯನ್ನು ಆಚರಿಸಲಾಯಿತು. ಕೇಕ್ ಕತ್ತರಿಸಿ ಸಂಭ್ರಮಿಸಿದರು ಪ್ರೇಮ್.

ನಟ ನೆನಪಿರಲಿ ಪ್ರೇಮ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 22 ವರ್ಷ ಕಳೆದಿದೆ. ಈ ಅವಧಿಯಲ್ಲಿ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ನಟನೆಯ ‘ಅಪ್ಪಾ ಐ ಲವ್​ ಯೂ’ ಚಿತ್ರದ (Appa I Love You Movie) ಆಡಿಯೋ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ತಬಲಾ ನಾಣಿ, ಮಾನ್ವಿತಾ ಕಾಮತ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಭಿಷೇಕ್ ಅಂಬರೀಷ್ ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ನೆನಪಿರಲಿ ಪ್ರೇಮ್ ಅವರ 22 ವರ್ಷಗಳ ಸಿನಿ ಜರ್ನಿಯನ್ನು ಆಚರಿಸಲಾಯಿತು. ಕೇಕ್ ಕತ್ತರಿಸಿ ಸಂಭ್ರಮಿಸಿದರು ಪ್ರೇಮ್. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More