ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ: ಮನೆಗಳು, 3 ಸೇತುವೆಗಳು ಕೊಚ್ಚಿಹೋಗಿ ಭಾರೀ ಹಾನಿ

Updated on: Oct 11, 2026 | 12:52 PM

ನೇಪಾಳದ ಪಶ್ಚಿಮ ಭಾಗದ ಗೂರ್ಖಾ ಜಿಲ್ಲೆಯಲ್ಲಿ ಬುಧಿ ಗಂಡಕಿ ನದಿಯಲ್ಲಿ ಭಾನುವಾರ ಹಠಾತ್ ಪ್ರವಾಹ ಉಂಟಾಗಿ ಭಾರೀ ಹಾನಿ ಸಂಭವಿಸಿದೆ. ಪ್ರವಾಹದ ರಭಸಕ್ಕೆ ಮನೆಗಳು, ಎರಡು ತೂಗು ಸೇತುವೆಗಳು ಹಾಗೂ ಒಂದು ಉಕ್ಕಿನ ಸೇತುವೆ ಕೊಚ್ಚಿಹೋಗಿವೆ. 341 ಮೆಗಾವ್ಯಾಟ್ ಸಾಮರ್ಥ್ಯದ ಬುಧಿ ಜಲವಿದ್ಯುತ್ ಯೋಜನೆಯ ಶಿಬಿರಕ್ಕೂ ಹಾನಿಯಾಗಿದೆ. ಚೀನಾದ ಗಡಿಯ ಸಮೀಪವಿರುವ ಚುಮ್ನುಬ್ರಿ ಗ್ರಾಮೀಣ ಪುರಸಭೆಯ ಜಗತ್ ಮತ್ತು ಸಲ್ಲೇರಿ ಸೇರಿದಂತೆ ಹಲವು ಪ್ರದೇಶಗಳು ಪ್ರವಾಹದಿಂದ ಬಾಧಿತವಾಗಿವೆ.

ಕಠ್ಮಂಡು, ಅಕ್ಟೋಬರ್ 11: ನೇಪಾಳದ ಪಶ್ಚಿಮ ಭಾಗದ ಗೂರ್ಖಾ ಜಿಲ್ಲೆಯಲ್ಲಿ ಬುಧಿ ಗಂಡಕಿ ನದಿಯಲ್ಲಿ ಭಾನುವಾರ ಹಠಾತ್ ಪ್ರವಾಹ ಉಂಟಾಗಿ ಭಾರೀ ಹಾನಿ ಸಂಭವಿಸಿದೆ. ಪ್ರವಾಹದ ರಭಸಕ್ಕೆ ಮನೆಗಳು, ಎರಡು ತೂಗು ಸೇತುವೆಗಳು ಹಾಗೂ ಒಂದು ಉಕ್ಕಿನ ಸೇತುವೆ ಕೊಚ್ಚಿಹೋಗಿವೆ. 341 ಮೆಗಾವ್ಯಾಟ್ ಸಾಮರ್ಥ್ಯದ ಬುಧಿ ಜಲವಿದ್ಯುತ್ ಯೋಜನೆಗೂ ಹಾನಿಯಾಗಿದೆ.

ಚೀನಾದ ಗಡಿಯ ಸಮೀಪವಿರುವ ಚುಮ್ನುಬ್ರಿ ಗ್ರಾಮೀಣ ಪುರಸಭೆಯ ಜಗತ್ ಮತ್ತು ಸಲ್ಲೇರಿ ಸೇರಿದಂತೆ ಹಲವು ಪ್ರದೇಶಗಳು ಪ್ರವಾಹದಿಂದ ಬಾಧಿತವಾಗಿವೆ. ನಿವಾಸಿಗಳು ಹಾಗೂ ಪ್ರವಾಸಿಗರು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಭಾನುವಾರ ಬೆಳಗಿನವರೆಗೆ ಯಾವುದೇ ಸಾವು ಸಂಭವಿಸಿದ ವರದಿ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹಕ್ಕೆ ಕಾರಣವೇನು?

ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋಕ್ಪಾ ಮತ್ತು ಚುಮ್ಲಿಂಗ್ ನಡುವಿನ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ನದಿಯ ಹರಿವು ತಾತ್ಕಾಲಿಕವಾಗಿ ತಡೆಯಲ್ಪಟ್ಟಿತ್ತು. ಬಳಿಕ ನೀರು ಏಕಾಏಕಿ ಹರಿದು ಪ್ರವಾಹ ಉಂಟಾಗಿರುವ ಸಾಧ್ಯತೆಯಿದೆ. ಅಧಿಕಾರಿಗಳು ಹಾನಿಯ ಪ್ರಮಾಣವನ್ನು ಪರಿಶೀಲಿಸುತ್ತಿದ್ದಾರೆ. ಮತ್ತಷ್ಟು ಪ್ರವಾಹದ ಆತಂಕ ಇರುವುದರಿಂದ ನದಿಯ ಕೆಳಭಾಗದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸೇತುವೆಗಳು ಕೊಚ್ಚಿಹೋಗಿರುವುದರಿಂದ ಹಲವು ಪ್ರದೇಶಗಳ ನಡುವಿನ ಸಂಪರ್ಕಕ್ಕೂ ತೊಂದರೆಯಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More