AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 675ಕ್ಕೆ ಏರಿಕೆ; 54 ಕನ್ನಡಿಗರು ಸುರಕ್ಷಿತವಾಗಿ ವಾಪಸ್

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 675ಕ್ಕೆ ಏರಿಕೆ; 54 ಕನ್ನಡಿಗರು ಸುರಕ್ಷಿತವಾಗಿ ವಾಪಸ್

ಪ್ರಸನ್ನ ಹೆಗಡೆ
|

Updated on: Aug 30, 2026 | 7:48 AM

Share

Nepal Flash Floods:ನೇಪಾಳದಲ್ಲಿ ಭೀಕರ ಪ್ರವಾಹದಿಂದ ಭಾರೀ ಹಾನಿಯಾಗಿದೆ. ಮೃತಪಟ್ಟವರ ಸಂಖ್ಯೆ 675ಕ್ಕೆ ಏರಿಕೆಯಾಗಿದ್ದು, 2400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, 108 ಭಾರತೀಯರನ್ನು ರಕ್ಷಿಸಲಾಗಿದೆ. ನೇಪಾಳಕ್ಕೆ ಪ್ರವಾಸಕ್ಕೆ ತೆರಳಿದ್ದ 54 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಕಠ್ಮಂಡು, ಆಗಸ್ಟ್​​ 30: ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದಾಗಿ ಭಾರೀ ಮಾರಣಹೋಮ ನಡೆದಿದೆ. ಹೆಜ್ಜೆ ಹೆಜ್ಜೆಗೂ ಮೃತದೇಹಗಳು ಪತ್ತೆಯಾಗುತ್ತಿದ್ದು, ಎಲ್ಲೆಡೆ ಸ್ಮಶಾನದ ವಾತಾವರಣ ನಿರ್ಮಾಣವಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 675ಕ್ಕೆ ಏರಿಕೆಯಾಗಿದ್ದು, 2400ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಾಣೆಯಾದವರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ. ಪ್ರವಾಹ ಪೀಡಿತ ನೇಪಾಳದಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, 108 ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. 330ಕ್ಕೂ ಅಧಿಕ ಮಂದಿ ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ. ಚೀನಾದಲ್ಲಿ 400 ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ನಡುವೆ ನೇಪಾಳಕ್ಕೆ ಪ್ರವಾಸಕ್ಕೆ ತೆರಳಿದ್ದ 54 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಟಿವಿ9ಗೆ ಮಾಹಿತಿ ನೀಡಿದ ಶಿವನಗೌಡ ಅವರು, ತಾವು ಪ್ರವಾಹದ ಹಿಂದಿನ ದಿನ ಆ ಸ್ಥಳಕ್ಕೆ ಭೇಟಿ ನೀಡಿದ್ದೆವು. ನಾವು ಅಲ್ಲಿ ಇದ್ದಿದ್ದರೆ ವಾಶ್ ಔಟ್ ಆಗುತ್ತಿದ್ದೆವು ಎಂದಿದ್ದಾರೆ. ಗುಡ್ಡ ಕುಸಿತಗಳು ಮತ್ತು ಮಂಜು ಕರಗಿ ನೀರು ಹೆಚ್ಚಾಗಿದ್ದ ಚಿತ್ರಣವನ್ನು ಅವರು ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us